ಥಿಂಪು: ಭೂತಾನ್‌ಗೆ ವಾಪಾಸದ ಪ್ರವಾಸಿಗರೊಬ್ಬರು ಕ್ವಾರಂಟೈನ್‌ನಿಂದ ಬಿಡುಗಡೆಯಾದ ನಂತರ ನಡೆಸಿದ ಪರೀಕ್ಷೆಯಲ್ಲೂ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಕಾರಣದಿಂದಾಗಿ, ಭೂತಾನ್ ಸರ್ಕಾರ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದೆ.
ಏಳೂವರೆ ಲಕ್ಷ ಜನಸಂಖ್ಯೆ ಇರುವ ರಾಷ್ಟ್ರದಲ್ಲಿ ’ಎಲ್ಲರೂ ಮನೆಯಲ್ಲೇ ಇರುವಂತೆ’ ಇಪ್ಪತ್ತೊಂದು ದಿನಗಳ ಲಾಕ್‌ಡೌನ್ ಘೋಷಿಸಿದೆ. ಇದರಿಂದಾಗಿ ಶಾಲೆಗಳು, ಕಚೇರಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಲು ಸೂಚಿಸಲಾಗಿದೆ.
27 ವರ್ಷದ ಭೂತಾನ್ ಮಹಿಳೆಯೊಬ್ಬರು ಕುವೈತ್‌ನಿಂದ ಹಿಂದಿರುಗಿದ ನಂತರ ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದ್ದರು. ಅವರ ವರದಿ ನೆಗೆಟಿವ್ ಬಂದಿತ್ತು. ನಂತರ ನಿಯಮದ ಪ್ರಕಾರ ಕ್ವಾರಂಟೈನ್ ಅವಧಿ ಪೂರ್ಣಗೊಂಡ ನಂತರ ಸೋಮವಾರ ನಡೆಸಿದ ಕೋವಿಡ್ ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿತ್ತು. ಈ ಮಹಿಳೆ ಭೂತಾನ್‌ನಾದ್ಯಂತ ವ್ಯಾಪಕವಾಗಿ ಪ್ರಯಾಣ ಬೆಳೆಸಿದ್ದರು.
ಈ ಘಟನೆಯ ಹಿನ್ನೆಲೆಯಲ್ಲಿ ರಾಷ್ಟ್ರದಾದ್ಯಂತಲಾಕ್‌ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ತ್ವರಿತವಾಗಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಗುರುತಿಸಿ, ಸೋಂಕಿತರನ್ನು ಪ್ರತ್ಯೇಕಿಸಿ, ಸೋಂಕಿನ ಸರಪಣಿ ತುಂಡರಿಸುವುದಕ್ಕಾಗಿ ಐದು ದಿನಗಳಿಂದ ಇಪ್ಪತ್ತೊಂದು ದಿನಗಳವರೆಗಿನ ಲಾಕ್‌ಡೌನ್ ಜಾರಿಗೊಳಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಪ್ರವಾಸೋದ್ಯಮವನ್ನೇ ಆಶ್ರಯಿಸಿರುವ ಭೂತಾನ್ ರಾಷ್ಟ್ರಕ್ಕೆ ಮಾರ್ಚ್ ತಿಂಗಳಲ್ಲಿ ಅಮೆರಿಕದಿಂದ ಬಂದಿದ್ದ ಪ್ರವಾಸಿಗರೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ದೇಶದ ಗಡಿಯನ್ನು ಮುಚ್ಚಲಾಗಿದೆ. ಇಲ್ಲಿವರೆಗೂ ಭೂತಾನ್‌ನಲ್ಲಿ 113 ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಅವರೆಲ್ಲರೂ ಪ್ರವಾಸಿಗರಾಗಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.