ADVERTISEMENT

ಬಿಹಾರ | 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜುಲೈ 2023, 11:09 IST
Last Updated 23 ಜುಲೈ 2023, 11:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಟ್ನಾ: ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ 3 ವರ್ಷದ ಮಗುವನ್ನು ರಕ್ಷಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಮಗುವನ್ನು ರಕ್ಷಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಯು ಕೆಲವು ಗಂಟೆಗಳ ವರೆಗೆ ಮುಂದುವರಿಯಿತು. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ADVERTISEMENT

ಕೊಳವೆ ಬಾವಿಗೆ ಬಿದ್ದ ಮಗುವನ್ನು ಶಿವಂ ಕುಮಾರ್ ಎಂದು ಗುರುತಿಸಲಾಗಿದೆ.

ರೈತರೊಬ್ಬರಿಗೆ ಸೇರಿದ ಕೊಳವೆ ಬಾವಿ ಇದಾಗಿದೆ. ಇದನ್ನು ಮುಚ್ಚದ ಕಾರಣ ಮಗು ಕೊಳವೆ ಬಾವಿಗೆ ಬಿದ್ದಿರುವುದು ತಿಳಿದು ಬಂದಿದೆ. ಜೊತೆಗೆ ಆಟವಾಡುತ್ತಿದ್ದ ಮಕ್ಕಳು ಮಗುವಿನ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.