ನವದೆಹಲಿ: ಮುಂದಿನ ತಿಂಗಳು ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಬುಧವಾರ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ.
ತನ್ನ ಮಿತ್ರಪಕ್ಷಗಳಾದ ಆರ್‌ಜೆಡಿ ಮತ್ತು ಎಡ ಪಕ್ಷಗಳೊಂದಿಗೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿರುವಾಗಲೇ ಪಕ್ಷದ ಉನ್ನತ ನಾಯಕತ್ವದ ಚರ್ಚೆಗಳು ನಡೆಯಲಿವೆ. ಕಾಂಗ್ರೆಸ್ ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಅಭ್ಯರ್ಥಿಗಳ ಆರಂಭಿಕ ಆಯ್ಕೆ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಆರ್‌ಜೆಡಿ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಆಡಳಿತಾರೂಢ ಎನ್‌ಡಿಎಯನ್ನು ಅಧಿಕಾರದಿಂದ ಕೆಳಗಿಳಿಸಲು ಪಣತೊಟ್ಟಿವೆ.
ಬಹುನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಮತ ಎಣಿಕೆ ನವೆಂಬರ್ 14ರಂದು ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.