ADVERTISEMENT

ಬಿಹಾರದಲ್ಲಿ ಮತ ಎಣಿಕೆ ಚುರುಕು: ಮಹಾಘಟಬಂಧನ ಮುನ್ನಡೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 4:32 IST
Last Updated 10 ನವೆಂಬರ್ 2020, 4:32 IST
ನಿತೀಶ್ ಕುಮಾರ್-ತೇಜಸ್ವಿ ಯಾದವ್-ಚಿರಾಗ್ ಪಾಸ್ವಾನ್
ನಿತೀಶ್ ಕುಮಾರ್-ತೇಜಸ್ವಿ ಯಾದವ್-ಚಿರಾಗ್ ಪಾಸ್ವಾನ್   

ಪಟ್ನಾ: ಸೂರ್ಯ ಮೇಲೇರುತ್ತಿದ್ದಂತೆ ಬಿಹಾರ ಫಲಿತಾಂಶದ ಲೆಕ್ಕಾಚಾರದ ಕಾವೂ ಏರುತ್ತಿದೆ. ಬೆಳಿಗ್ಗೆ 9.45ರ ಅವಧಿಯಲ್ಲಿ ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟ ಮಹಾಘಟಬಂಧನದ ಅಭ್ಯರ್ಥಿಗಳು 116 ಕ್ಷೇತ್ರಗಳಲ್ಲಿ ಮತ್ತು ಜೆಡಿಯು-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳು 111 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರು.

ಮತ ಎಣಿಕೆಯ ಆರಂಭದಲ್ಲಿ ಕಂಡುಬರುತ್ತಿರುವ ಮುನ್ನಡೆ ಮುಂದುವರಿದರೆ ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟವು ನಿಚ್ಚಳ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ಖಚಿತ ಎನಿಸುತ್ತಿದೆ.

ಲಾಕ್‌ಡೌನ್ ಘೋಷಣೆಯಾದ ಸಂದರ್ಭ ವಲಸೆ ಕಾರ್ಮಿಕರ ಕಷ್ಟಕ್ಕೆ ನಿತೀಶ್ ನೇತೃತ್ವದ ಎನ್‌ಡಿಎ ಸರ್ಕಾರ ಸಮರ್ಪಕವಾಗಿ ಸ್ಪಂದಿಸಲಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು. ಇದರ ಜೊತೆಗೆ ಬಿಹಾರದಲ್ಲಿ ಆಡಳಿತ ವಿರೋಧಿ ಅಲೆಯೂ ಇತ್ತು ಎಂಬ ಮಾತುಗಳಿದ್ದವು.

ADVERTISEMENT

ಚುನಾವಣೆಯಲ್ಲಿ ಸ್ಥಳೀಯ ವಿಷಯವನ್ನು ಪ್ರಸ್ತಾಪಿಸಿದ್ದ ಆರ್‌ಜೆಡಿಯ ತೇಜಸ್ವಿ ಯಾದವ್‌ 10 ಲಕ್ಷ ಉದ್ಯೋಗದ ಭರವಸೆ ನೀಡಿ ಯುವಜನರನ್ನು ಆಕರ್ಷಿಸಿದ್ದರು. ಈ ಅಂಶಗಳು ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.