ADVERTISEMENT

ಬಿಹಾರ ವಿಧಾನಸಭಾ ಚುನಾವಣೆ ಪಾರದರ್ಶಕವಾಗಿರಲಿದೆ: ಜ್ಞಾನೇಶ್‌ ಕುಮಾರ್‌

ಪಿಟಿಐ
Published 2 ನವೆಂಬರ್ 2025, 10:28 IST
Last Updated 2 ನವೆಂಬರ್ 2025, 10:28 IST
   

ಕಾನ್ಪುರ: ಬಿಹಾರ ವಿಧಾನಸಭಾ ಚುನಾವಣೆಯು ಕಾನೂನು ಸುವ್ಯವಸ್ಥೆಯ ಚೌಕಟ್ಟಿನಲ್ಲಿ ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು ಭಾನುವಾರ ತಿಳಿಸಿದ್ದಾರೆ.

‘ಎಲ್ಲಾ ಮತದಾರರಿಗೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುವ ಅವಕಾಶವಿದೆ. ಮತದಾನವು ಕಾನೂನಿನ ಚೌಕಟ್ಟಿನಲ್ಲಿ ನಡೆಯಲಿದೆ. ಈ ವೇಳೆ ಯಾವುದೇ ರೀತಿಯ ಅಶಾಂತಿ, ಗಲಭೆಗಳನ್ನು ಚುನಾವಣಾ ಆಯೋಗವು ತೀವ್ರವಾಗಿ ವಿರೋಧಿಸುತ್ತದೆ’ ಎಂದು ಹೇಳಿದ್ದಾರೆ.

ಎಲ್ಲಾ ಮತದಾರರು ತಮ್ಮ ಕರ್ತವ್ಯವನ್ನು ನಿಭಾಯಿಸುವ ವಿಶ್ವಾಸವಿದೆ. ಮತದಾರರು ಸ್ವಯಂ ಪ್ರೇರಿತರಾಗಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಬೇಕು ಎಂದು ಜ್ಞಾನೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.

ADVERTISEMENT

243 ಸದಸ್ಯ ಬಲದ ಬಿಹಾರದಲ್ಲಿ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.