ADVERTISEMENT

ಬಿಹಾರ ಚುನಾವಣೆ: 8 ಕ್ಷೇತ್ರಗಳಲ್ಲಿ ಪರಸ್ಪರ ಸ್ಪರ್ಧಿಸಲಿರುವ 'ಇಂಡಿಯಾ' ಮೈತ್ರಿಕೂಟ

ಪಿಟಿಐ
Published 22 ಅಕ್ಟೋಬರ್ 2025, 9:38 IST
Last Updated 22 ಅಕ್ಟೋಬರ್ 2025, 9:38 IST
   

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 8 ಕ್ಷೇತ್ರಗಳಲ್ಲಿ 'ಇಂಡಿಯಾ' ಮೈತ್ರಿಕೂಟದ ಅಭ್ಯರ್ಥಿಗಳು ಪರಸ್ಪರ ಸ್ಪರ್ಧಿಸಲಿದ್ದಾರೆ.

'ಇಂಡಿಯಾ' ಮೈತ್ರಿಕೂಟದಲ್ಲಿ ಕ್ಷೇತ್ರ ಹಂಚಿಕೆಯ ಭಿನ್ನಾಭಿಪ್ರಾಯವು ಇದಕ್ಕೆ ಕಾರಣವಾಗಿದೆ.

ಕ್ಷೇತ್ರ ಹಂಚಿಕೆಯಲ್ಲಿ ಕಾಂಗ್ರೆಸ್, ಆರ್‌ಜೆಡಿ ಹಾಗೂ ಮೈತ್ರಿಕೂಟದ ಇತರ ಪಕ್ಷಗಳ ನಡುವಿನ ತಿಕ್ಕಾಟದಿಂದಾಗಿ 'ಇಂಡಿಯಾ' ಕೂಟದ ಅಭ್ಯರ್ಥಿಗಳು ಪರಸ್ಪರ ಸ್ಪರ್ಧಿಸುವಂತಾಗಿದೆ.

ADVERTISEMENT

ವೈಶಾಲಿ, ನರ್ಕಟಿಯಾಗಂಜ್, ರಾಜ್‌ಪಕರ್, ರೋಸೆರಾ, ಬಚ್ವಾರಾ, ಕರಗ್‌ಹರ್, ಬಿಹಾರ್ ಷರೀಫ್ ಮತ್ತು ಸಿಕಂದರಾ ಕ್ಷೇತ್ರದಲ್ಲಿ 'ಇಂಡಿಯಾ' ಮೈತ್ರಿಕೂಟದ ಅಭ್ಯರ್ಥಿಗಳು ಪರಸ್ಪರ ಸ್ಪರ್ಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಾಗೂ ಆರ್‌ಜೆಡಿ ನಾಯಕರು ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟದ ಕಾಂಗ್ರೆಸ್ ಪಕ್ಷವು 61 ಕ್ಷೇತ್ರ, ಆರ್‌ಜೆಡಿ ಪಕ್ಷವು 143 ಕ್ಷೇತ್ರ, ಸಿಪಿಐ (ಎಂಎಲ್) ಪಕ್ಷವು 20 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಹಾಗೂ 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.