ADVERTISEMENT

ನಿಗದಿತ ಸಮಯಕ್ಕೆ ಬಿಹಾರ ವಿಧಾನಸಭೆ ಚುನಾವಣೆ: ಚುನಾವಣಾ ಆಯೋಗ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 10:48 IST
Last Updated 23 ಆಗಸ್ಟ್ 2020, 10:48 IST
ಚುನಾವಣಾ ಆಯೋಗ
ಚುನಾವಣಾ ಆಯೋಗ   

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ನಿಗದಿತ ಸಮಯಕ್ಕೆ ನಡೆಯಲಿವೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

243 ಸದಸ್ಯರನ್ನೊಳಗೊಂಡ ಬಿಹಾರ ವಿಧಾನಸಭೆಯ ಅವಧಿ ನವೆಂಬರ್‌ 29ಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ, ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ ಎಂದು ಆಯೋಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋವಿಡ್‌–19 ಸಾಂಕ್ರಾಮಿಕ ಕಾಯಿಲೆ ಕಾರಣಕ್ಕೆ ಚುನಾವಣೆಯನ್ನು ಮುಂದೂಡುವಂತೆ ಕೆಲವು ರಾಜಕೀಯ ಪಕ್ಷಗಳು ಒತ್ತಾಯಿಸಿವೆ.

ADVERTISEMENT

ಇಂತಹ ಸಂಕಷ್ಟದ ಸಮಯದಲ್ಲಿ ಚುನಾವಣೆ ನಡೆಸುವ ಅಗತ್ಯವೇನಿದೆ ಎಂದು ರಾಷ್ಟ್ರೀಯ ಜನತಾ ದಳ ಪ್ರಶ್ನಿಸಿದೆ. ಎನ್‌ಡಿಎ ಮೈತ್ರಿಕೂಟದ ಲೋಕ್‌ ಜನಶಕ್ತಿ ಪಕ್ಷವು ಸಹ ಚುನಾವಣೆಯನ್ನು ಮುಂದೂಡುವಂತೆ ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.