ADVERTISEMENT

ಪ್ರವಾಹ ಪರಿಸ್ಥಿತಿ ಅವಲೋಕಿಸಲು ತೆರಳಿದ್ದಾಗ ತೆಪ್ಪ ಮಗುಚಿ ನೀರಲ್ಲಿ ಮುಳುಗಿದ ಸಂಸದ

ಬಿಹಾರ

ಏಜೆನ್ಸೀಸ್
Published 3 ಅಕ್ಟೋಬರ್ 2019, 4:01 IST
Last Updated 3 ಅಕ್ಟೋಬರ್ 2019, 4:01 IST
   

ಪಟ್ನಾ:ಭೀಕರಪ್ರವಾಹಕ್ಕೆ ತುತ್ತಾಗಿರುವ ಬಿಹಾರದಲ್ಲಿ ಪರಿಸ್ಥಿತಿ ಅವಲೋಕಿಸಲು ತೆರಳಿದ ಸಂಸದರೇ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.

ಬಿಜೆಪಿ ಸಂಸದ ರಾಮ ಕೃಪಾಳ್ ಯಾದವ್ ಅವರು ಪ್ರವಾಹಪೀಡಿತ ಪಟ್ನಾದ ಮಸೌರಿಗೆ ಪರಿಸ್ಥಿತಿ ಅವಲೋಕಿಸಲು ಬುಧವಾರ ತೆರಳಿದ್ದರು. ಈ ವೇಳೆ ಚಿಕ್ಕ ತೆಪ್ಪವೊಂದರಲ್ಲಿ ಅವರನ್ನು ಕರೆದೊಯ್ಯಲಾಗಿತ್ತು. ಸಮೀಕ್ಷೆ ನಡೆಸಿ ದಡದತ್ತ ವಾಪಸಾಗುತ್ತಿದ್ದ ವೇಳೆ ಸಂಸದರಿದ್ದ ತೆಪ್ಪ ನೀರಿನಲ್ಲಿ ಮುಳುಗಿದೆ. ಈ ವೇಳೆ ಸಂಸದರೂ ಆಯ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ.

ಭಾರೀ ಮಳೆಯಿಂದಾಗಿ ಬಿಹಾರದಾದ್ಯಂತ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಪಟ್ನಾದ ಬಹುತೇಕ ಪ್ರದೇಶಗಳು ಮುಳುಗಡೆಯಾಗಿದ್ದವು. ಭಾರೀ ಮಳೆ, ಪ್ರವಾಹದಿಂದ ಬಿಹಾರ, ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಲ್ಲಿ 110ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.