ADVERTISEMENT

ಬಿಹಾರದ ಇಟ್ಟಿಗೆ ಕಾರ್ಖಾನೆಯಲ್ಲಿ ಸ್ಫೋಟ: 9 ಮಂದಿ ಕಾರ್ಮಿಕರ ದುರ್ಮರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಡಿಸೆಂಬರ್ 2022, 7:52 IST
Last Updated 24 ಡಿಸೆಂಬರ್ 2022, 7:52 IST
ಬಿಹಾರದಲ್ಲಿ ಇಟ್ಟಿಗೆ ಕಾರ್ಖಾನೆ ಸ್ಫೋಟ (ಟ್ವಿಟರ್ ಚಿತ್ರ)
ಬಿಹಾರದಲ್ಲಿ ಇಟ್ಟಿಗೆ ಕಾರ್ಖಾನೆ ಸ್ಫೋಟ (ಟ್ವಿಟರ್ ಚಿತ್ರ)   

ಪಟ್ನಾ: ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಸಂಭವಿಸಿದ ಇಟ್ಟಿಗೆ ಕಾರ್ಖಾನೆ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಇಟ್ಟಿಗೆ ಗೂಡಿನ ಚಿಮಣಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಇದುವರೆಗೆ 9 ಮಂದಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು,

ADVERTISEMENT

ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಮೋತಿಹಾರಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದೆ.

ಮೋತಿಹಾರಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.