ADVERTISEMENT

ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ: ಐವರ ಸಾವು

ಸ್ಫೋಟದ ತೀವ್ರತೆಗೆ ಮೂರು ಅಂತಸ್ತಿನ ಕಟ್ಟಡ ಕುಸಿತ

ಪಿಟಿಐ
Published 24 ಜುಲೈ 2022, 13:40 IST
Last Updated 24 ಜುಲೈ 2022, 13:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸರನಿ(ಬಿಹಾರ್) (ಪಿಟಿಐ): ಬಿಹಾರದ ಸರನಿ ಜಿಲ್ಲೆಯ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ನಾಲ್ಕು ವರ್ಷದ ಮಗು, ಮಹಿಳೆ ಸೇರಿ ಕನಿಷ್ಠ ಐದು ಮಂದಿ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಸ್ಫೋಟದ ತೀವ್ರತೆಗೆ ಖೋಡೈಬಾಗ್‌ ಬಜಾರ್‌ನಲ್ಲಿರುವ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಶಬೀರ್‌ ಹುಸೇನ್ ಎಂಬುವರನ್ನು ಕಟ್ಟಡದ ಮಾಲೀಕರು ಎಂದು ಗುರುತಿಸಲಾಗಿದ್ದು, ಶಬೀರ್‌ ಅಕ್ರಮವಾಗಿ ಪಟಾಕಿ ತಯಾರಿಕಾ ಘಟಕ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ’ ಎಂದು ಸರನಿ ಪೊಲೀಸ್‌ ವರಿಷ್ಠಾಧಿಕಾರಿ ಸಂತೋಷ್‌ ಕುಮಾರ್‌ ತಿಳಿಸಿದ್ದಾರೆ.

ಕಟ್ಟಡದ ಅವಶೇಷಗಳಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಮೃತರ ಗುರುತು ಪತ್ತೆಗೆ ಯತ್ನಿಸಲಾಗುತ್ತಿದೆ. ಪಟ್ನಾದಿಂದ ವಿಧಿವಿಜ್ಞಾನ ತಜ್ಞರನ್ನು ಕರೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.