ADVERTISEMENT

‘ಒಂದು ದೇಶ, ಒಂದು ವಿದ್ಯುತ್ ದರ' ನೀತಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 9:58 IST
Last Updated 1 ಡಿಸೆಂಬರ್ 2022, 9:58 IST
ನಿತೀಶ್ ಕುಮಾರ್
ನಿತೀಶ್ ಕುಮಾರ್   

ಪಟ್ನಾ:'ಒಂದು ದೇಶ, ಒಂದು ವಿದ್ಯುತ್ ದರ' ನೀತಿಗೆಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ.

ಬಿಹಾರದಲ್ಲಿ ₹ 15,871 ಕೋಟಿ ಮೌಲ್ಯದ ವಿದ್ಯುತ್ ಯೋಜನೆಗಳನ್ನು ಬುಧವಾರ ಅನಾವರಣಗೊಳಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರಗಳ ವಿದ್ಯುತ್‌ ಖರೀದಿಯಲ್ಲಿ ಬಹಳ ವ್ಯತ್ಯಾಸವಿದೆ. ಕೆಲವು ರಾಜ್ಯಗಳು ಕಡಿಮೆ ಬೆಲೆಗೆ ವಿದ್ಯುತ್‌ ಖರೀದಿ ಮಾಡಿದರೆ, ಮತ್ತೆ ಕೆಲವು ರಾಜ್ಯಗಳು ಹೆಚ್ಚಿನ ಬೆಲೆಗೆ ವಿದ್ಯುತ್‌ ಖರೀದಿ ಮಾಡುತ್ತಿವೆ. ಹಾಗಾಗಿ ಕೇಂದ್ರ ಸರ್ಕಾರ 'ಒಂದು ದೇಶ, ಒಂದು ವಿದ್ಯುತ್ ದರ' ನೀತಿಯನ್ನು ಜಾರಿಗೆ ತರಬೇಕು ಎಂದು ಪ್ರತಿಪಾದಿಸಿದರು.

ADVERTISEMENT

ಎಲ್ಲ ರಾಜ್ಯಗಳು ದೇಶದ ಒಟ್ಟಾರೆ ಬೆಳವಣಿಗೆಯಲ್ಲಿ ಭಾಗವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ‘ಒಂದು ರಾಷ್ಟ್ರ, ಒಂದು ವಿದ್ಯುತ್ ದರ ನೀತಿ ಇರಬೇಕು ಎಂದು ಅವರು ಹೇಳಿದ್ದಾರೆ. ಪಾರದರ್ಶಕತೆಗಾಗಿ ಬಿಹಾರದಲ್ಲಿಸ್ಮಾರ್ಟ್ ಪ್ರಿಪೇಯ್ಡ್ ವಿದ್ಯುತ್ ಮೀಟರ್‌ಗಳನ್ನು ಅಳವಡಿಸಲು ಸರ್ಕಾರ ನಿರ್ಧರಿಸಿದೆ ಎಂದು ನಿತೀಶ್ ಕುಮಾರ್ ಕುಮಾರ್‌ ಹೇಳಿದರು.

2005ರಲ್ಲಿ ನಾನು ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಕೇವಲ 700 ಮೆಗಾವ್ಯಾಟ್ ವಿದ್ಯುತ್ ಬಳಕೆಯಾಗುತ್ತಿತ್ತು, ಈಗ ಅದು 6,738 ಮೆಗಾವ್ಯಾಟ್‌ಗೆ ಏರಿಕೆಯಾಗಿದೆ ಎಂದು ನಿತೀಶ್ ಕುಮಾರ್ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.