ADVERTISEMENT

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಕೋವಿಡ್ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜನವರಿ 2022, 14:02 IST
Last Updated 10 ಜನವರಿ 2022, 14:02 IST
ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌
ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌    

ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಕೋವಿಡ್‌ ಸೋಂಕು ಇರುವುದು ಪತ್ತೆಯಾಗಿದೆ.

ಈ ಕುರಿತು ಸೋಮವಾರ ಟ್ವೀಟ್‌ ಮಾಡಿರುವ ಸುದ್ದಿಸಂಸ್ಥೆ ‘ಎಎನ್‌ಐ’, ‘ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ’ ಎಂದು ತಿಳಿಸಿದೆ.

ವೈದ್ಯರ ಸಲಹೆಯ ಮೇರೆಗೆ ನಿತೀಶ್‌ ಕುಮಾರ್‌ ಅವರು ಹೋಮ್‌ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ಅವರ ಕಚೇರಿ ಮೂಲಗಳು ಎಎನ್‌ಐಗೆ ಹೇಳಿವೆ.

ADVERTISEMENT

ದೇಶದಲ್ಲಿ ಇಂದು 1,79,723 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 146 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಹೀಗಾಗಿ, ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 7,23,619ಕ್ಕೆ ಏರಿದ್ದು, ಪಾಸಿಟಿವಿಟಿ ದರ ಶೇಕಡ 13.29ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.