ಪಟ್ನಾ: ಎರಡು ಮತದಾರರ ಗುರುತಿನ ಚೀಟಿ(ಎಪಿಕ್) ಹೊಂದಿರುವುದು ಹಾಗೂ ಎರಡು ಸ್ಥಳಗಳಲ್ಲಿ ಮತದಾರ ಆಗಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂಬ ಆರೋಪಗಳಿಗೆ ಸಂಬಂಧಿಸಿ ಬಿಹಾರ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ವಿಜಯಕುಮಾರ್ ಸಿನ್ಹಾ ಅವರಿಗೆ ಚುನಾವಣಾ ಆಯೋಗ ಭಾನುವಾರ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಕುರಿತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಆರೋಪಿಸಿದ್ದರಲ್ಲದೇ, ಡಿಸಿಎಂ ಸಿನ್ಹಾ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ್ದರು.
‘ಬಂಕಿಪುರ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಯಿಂದ ನನ್ನ ಮತ್ತು ನನ್ನ ಕುಟುಂಬದವರ ಹೆಸರು ತೆಗೆದು ಹಾಕಬೇಕು. ಲಖಿಸರಾಯ್ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರ್ಪಡೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದೆ. ಈ ಕುರಿತ ದಾಖಲೆಗಳು ನನ್ನಲ್ಲಿವೆ’ ಎಂದು ಸಿನ್ಹಾ ಪ್ರತಿಕ್ರಿಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.