ADVERTISEMENT

ಬಿಹಾರ: ₹7,200 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ

ಪಿಟಿಐ
Published 18 ಜುಲೈ 2025, 14:04 IST
Last Updated 18 ಜುಲೈ 2025, 14:04 IST
ಬಿಹಾರದ ಮೋತಿಹಾರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫಲಾನುಭವಿಗಳಿಗೆ ನೂತನ ಮನೆಗಳ ಕೀಗಳನ್ನು ಹಸ್ತಾಂತರ ಮಾಡಿದರು. ಮುಖ್ಯಮಂತ್ರಿ ನಿತೀಶ್‌ಕುಮಾರ್ ಹಾಜರಿದ್ದರು – ಪಿಟಿಐ ಚಿತ್ರ
ಬಿಹಾರದ ಮೋತಿಹಾರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫಲಾನುಭವಿಗಳಿಗೆ ನೂತನ ಮನೆಗಳ ಕೀಗಳನ್ನು ಹಸ್ತಾಂತರ ಮಾಡಿದರು. ಮುಖ್ಯಮಂತ್ರಿ ನಿತೀಶ್‌ಕುಮಾರ್ ಹಾಜರಿದ್ದರು – ಪಿಟಿಐ ಚಿತ್ರ   

ಮೋತಿಹಾರಿ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ₹ 7,200 ಕೋಟಿಗೂ ಹೆಚ್ಚು ಮೊತ್ತದ ರೈಲು, ಮೀನುಗಾರಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶುಕ್ರವಾರ ಚಾಲನೆ ನೀಡಿದರು.

ಬಿಹಾರ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ವೇಳೆ ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಅಲ್ಲದೇ ಹಲವು ರೈಲ್ವೆ, ರಸ್ತೆ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದರು.

ADVERTISEMENT

ದರ್ಭಾಂಗ ಮತ್ತು ಪಾಟ್ನಾದಲ್ಲಿ ನೂತನ ಮಾಹಿತಿ ತಂತ್ರಜ್ಞಾನ ಪಾರ್ಕ್‌ ಮತ್ತು ಸ್ಟಾರ್ಟ್‌ಅಪ್‌ಗಳನ್ನು ಪ್ರಧಾನಿ ಉದ್ಘಾಟಿಸಿದರು. 12 ಸಾವಿರ ಫಲಾನುಭವಿಗಳಿಗೆ ಹೊಸ ಮನೆಗಳ ಕೀಗಳನ್ನು ವಿತರಿಸಿದರು. ಪ್ರಧಾನಮಂತ್ರಿ ಗ್ರಾಮೀಣ ಆವಾಸ್‌ ಯೋಜನೆಯಡಿ 40 ಸಾವಿರ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲು ₹160 ಕೋಟಿ ಬಿಡುಗಡೆ ಮಾಡಿದರು.

ಮೋತಿವಿಹಾರಿಯಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಜನರತ್ತ ಪ್ರಧಾನಿ ನರೇಂದ್ರ ಮೋದಿ ಕೈಬೀಸಿದರು. ಮುಖ್ಯಮಂತ್ರಿ ನಿತೀಶ್‌ ಕುಮಾರ್ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಚಿರಾಗ್ ಪಾಸ್ವಾನ್ ಮತ್ತಿತರರು ಹಾಜರಿದ್ದರು –ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.