ಪಟ್ನಾ: ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಪಾತಕಿ ಅನಂತ್ ಕುಮಾರ್ ಸಿಂಗ್ ಶುಕ್ರವಾರ ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
ಜನ ಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಅನಂತ್ ಕುಮಾರ್ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
ಆರ್‌ಜೆಡಿ ಅಭ್ಯರ್ಥಿ ವೀಣಾ ಸಿಂಗ್ ಅವರ ವಿರುದ್ಧ 28,206 ಮತಗಳಿಂದ ಜೆಡಿಯು ಪಕ್ಷದ ಅನಂತ್ ಕುಮಾರ್ ಜಯ ಸಾಧಿಸಿದ್ದಾರೆ. ಇವರು ಒಟ್ಟು 91,416 ಮತಗಳನ್ನು ಪಡೆದಿದ್ದಾರೆ. ಆರ್‌ಜೆಡಿ ಅಭ್ಯರ್ಥಿ 63,210 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
ಮತದಾನ ನಡೆಯುವ ಕೆಲವೇ ದಿನಗಳ ಮೊದಲು ಕೊಲೆ ನಡೆದಿದ್ದು, ಚುನಾವಣಾ ಪ್ರಚಾರದ ನಡುವೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.
2022 ರಲ್ಲಿ ಯುಎಪಿಎ ಪ್ರಕರಣದಲ್ಲಿ ಅನಂತ್ ಕುಮಾರ್ ಸಿಂಗ್ ಶಿಕ್ಷೆಗೆ ಒಳಗಾಗಿದ್ದರು. ಆ ಸಂದರ್ಭದಲ್ಲಿ ಪತ್ನಿ ನೀಲಂ ದೇವಿಗೆ ಅಧಿಕಾರ ಹಸ್ತಾಂತರಿಸಿದ್ದರು ಇತ್ತೀಚೆಗೆ ಪಟ್ನಾ ಹೈಕೋರ್ಟ್ ಅವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಆ ಬಳಿಕ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.