
ಬಿಹಾರದ ಮತ ಎಣಿಕೆ ಕೇಂದ್ರ
– ಪಿಟಿಐ ಚಿತ್ರ
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪೂರ್ಣಗಾಗಿ ಪ್ರಕಟಗೊಳ್ಳುವುದಕ್ಕೂ ಮುನ್ನವೇ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿದೆ.
ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
‘ಸಂಭ್ರಮಾಚರಣೆಗೆ ಸಟ್ಟು ಪರೋಟ, ಬೈಂಗನ್ ಚೋಖಾ ತಯಾರಿಸಿದ್ದೇವೆ. ಸಿಹಿಯಾಗಿ ಜಿಲೇಬಿ ತಯಾರಿದೆ. ಸದ್ಯ ಲಿಟ್ಟಿ ಜೋಖಾ ತಯಾರಿಸುತ್ತಿದ್ದೇವೆ’ ಎಂದು ಮಿಠಾಯಿ ತಯಾರಕರೊಬ್ಬರು ಹೇಳಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು 243 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಪಟ್ನಾದಲ್ಲಿರುವ ಜೆಡಿಯು ಕಚೇರಿ ಮುಂದೆ ನಿತೀಶ್ ಕುಮಾರ್ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.