ADVERTISEMENT

ಬಿಹಾರ ಚುನಾವಣೆ | NDA ಸೀಟು ಹಂಚಿಕೆ ಘೋಷಣೆ ಮಾಹಿತಿ; JDU, BJPಗೆ ಎಷ್ಟು ಸ್ಥಾನ?

ಪಿಟಿಐ
Published 11 ಅಕ್ಟೋಬರ್ 2025, 11:06 IST
Last Updated 11 ಅಕ್ಟೋಬರ್ 2025, 11:06 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (ಸಂಗ್ರಹ ಚಿತ್ರ)&nbsp;</p></div>

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (ಸಂಗ್ರಹ ಚಿತ್ರ) 

   

ಪಿಟಿಐ ಚಿತ್ರ

ಪಟ್ನಾ: ಬಿಹಾರದಲ್ಲಿ ಘೋಷಣೆಯಾಗಿರುವ ವಿಧಾನಸಭಾ ಚುನಾವಣೆಗೆ ಎನ್‌ಡಿಎ ಘಟಕಗಳೊಂದಿಗೆ ಸೀಟು ಹಂಚಿಕೆ ಮತ್ತು ಟಿಕೆಟ್‌ಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವವು ಭಾನುವಾರ ಪ್ರಮುಖ ಘೋಷಣೆಗಳನ್ನು ಮಾಡಲಿದೆ ಎಂದು ಬಿಜೆಪಿಯ ಬಿಹಾರ ಘಟಕದ ಮುಖ್ಯಸ್ಥ ದಿಲೀಪ್ ಜೈಸ್ವಾಲ್ ಶನಿವಾರ ಹೇಳಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ರಾಜ್ಯದ ಎನ್‌ಡಿಎ ಮಿತ್ರಪಕ್ಷಗಳಲ್ಲಿ ಅಸಮಾಧಾನದ ಹೊಗೆಯಾಡುತ್ತಿರುವ ವದಂತಿಗಳನ್ನು ತಳ್ಳಿಹಾಕಿದರು.

‘ಎನ್‌ಡಿಎ ಒಕ್ಕೂಟದಲ್ಲಿ ಎಲ್ಲವೂ ಸರಿಯಾಗಿದೆ. ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ ಪಟ್ಟಿಗೆ ಸಂಬಂಧಿಸಿದಂತೆ ಭಾನುವಾರ ಬೆಳಿಗ್ಗೆ 11ಕ್ಕೆ ಪ್ರಮುಖ ಘೋಷಣೆಗಳು ಹೊರಬೀಳಲಿವೆ’ ಎಂದಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಂಎಲ್‌) ಮುಖ್ಯಸ್ಥ ಉಪೇಂದ್ರ ಕುಶ್ವಾ ಕೂಡಾ ಅಸಮಾಧಾನದ ವದಂತಿಗಳನ್ನು ತಳ್ಳಿಹಾಕಿದರು. ಸೀಟು ಹಂಚಿಕೆ ಮಾತುಕತೆ ಅಂತಿಮಗೊಂಡಿಲ್ಲ ಎಂದಿದ್ದಾರೆ.

'ತಮ್ಮ ಪಕ್ಷಕ್ಕೆ (ಹಿಂದೂಸ್ತಾನಿ ಅವಾಮ್ ಮೋರ್ಚಾ) ಗೌರವಾನ್ವಿತ ಸಂಖ್ಯೆಯ ಸ್ಥಾನಗಳನ್ನು ನೀಡಬೇಕು ಎಂಬುದು ನಮ್ಮ ವಿನಂತಿಯೇ ಹೊರತು, ಹಕ್ಕೊತ್ತಾಯವಲ್ಲ. ಕಳೆದ ಹಲವು ವರ್ಷಗಳಿಂದ ನಾನು ಎನ್‌ಡಿಎಗೆ ಸಹಾಯ ಮಾಡುತ್ತಲೇ ಬಂದಿದ್ದೇನೆ. ಒಂದೊಮ್ಮೆ ಸಿಗದೇ ಇದ್ದರೆ ಪಕ್ಷವು ಚುನಾವಣೆಯಲ್ಲಿ ಸ್ಪರ್ಧೆಸದೇ ಇರಬಹುದು’ ಎಂದು ಕೇಂದ್ರ ಸಚಿವ ಜಿತನ್ ರಾಮ್‌ ಮಾಂಝಿ ಹೇಳಿದ್ದಾರೆ.

‘ಪಕ್ಷ ಸ್ಥಾಪನೆಯಾಗಿ ಹತ್ತು ವರ್ಷಗಳ ನಂತರವೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಮಾನ್ಯತೆ ಪಡೆಯದ ಪಕ್ಷವಾಗಿಯೇ ಉಳಿದಿದೆ. ನಮಗೆ ಕನಿಷ್ಠ 15 ಸ್ಥಾನಗಳನ್ನು ನೀಡದಿದ್ದರೆ ಅದು ನನಗೆ ಮತ್ತು ನನ್ನ ಪಕ್ಷಕ್ಕೆ ಅವಮಾನವಾದಂತೆ. 15 ಕ್ಷೇತ್ರಗಳನ್ನು ನೀಡಿದರೆ ಕನಿಷ್ಠ 8ರಿಂದ 9 ಸ್ಥಾನಗಳನ್ನು ಗೆಲ್ಲಬಹುದು. ಅದರಿಂದ ಪಕ್ಷಕ್ಕೆ ಮಾನ್ಯತೆಯೂ ಸಿಗಲಿದೆ’ ಎಂದಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಮತ್ತೊಂದು ಪಕ್ಷ ಲೋಕ ಜನಶಕ್ತಿ ಪಕ್ಷದ (ರಾಮ್‌ ವಿಲಾಸ್‌) ಮುಖ್ಯಸ್ಥರೂ ಆಗಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮಾತನಾಡಿ, ‘ಪಕ್ಷವು ಈ ಹಿಂದೆ 20–22 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಆದರೆ ಈಗ ಕನಿಷ್ಠ 25 ಸ್ಥಾನಗಳನ್ನು ಕೇಳುತ್ತಿದೆ’ ಎಂದು ವರದಿಯಾಗಿದೆ.

ಬಿಹಾರ ವಿಧಾನಸಭೆಗೆ ನ. 6 ಮತ್ತು 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನ. 14ರಂದು ಮತ ಎಣಿಕೆಗೆ ದಿನಾಂಕ ನಿಗದಿಯಾಗಿದೆ.

ಎನ್‌ಡಿಎ ಮೂಲಗಳ ಪ್ರಕಾರ ದೊಡ್ಡ ಮಿತ್ರಪಕ್ಷಗಳಾದ ಜೆಡಿಯು ಮತ್ತು ಬಿಜೆಪಿ ಕ್ರಮವಾಗಿ 102 ಮತ್ತು 101 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಹಿಂದೆ ಸುಮಾರು 20-22 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದ ಎಲ್‌ಜೆಪಿ (ರಾಮ್ ವಿಲಾಸ್) ಈಗ ಕನಿಷ್ಠ 25 ಸ್ಥಾನಗಳನ್ನು ಕೇಳುತ್ತಿದೆ. ಪಕ್ಷವು ಕನಿಷ್ಠ 45 ಸ್ಥಾನಗಳನ್ನು ಪಡೆಯಬೇಕು ಎಂದು ಎಲ್‌ಜೆಪಿ (ಆರ್‌ವಿ) ಯ ಹಿರಿಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಹೆಸರು ಬಹಿರಂಗಪಡಿಸಲು ಬಯಸದ ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.