ರಾಹುಲ್ ಗಾಂಧಿ
ಕಿಶನ್‌ಗಂಜ್: ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಮತಕಳ್ಳತನ ಪಿತೂರಿಯ ವಿರುದ್ಧ ಜನ ಒಗ್ಗೂಡಿದರೆ, ಇಂಡಿಯಾ ಮೈತ್ರಿಕೂಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.
ಕಿಶನ್‌ಗಂಜ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ರಾಹುಲ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಿಗೆ ಬೇಕಾದರೂ ಹೋಗಬಹುದು. ಆದರೆ ಅವರು ಅಂತಿಮವಾಗಿ ಮತಗಳ್ಳತನದಲ್ಲಿ ತೊಡಗಿದ್ದಕ್ಕಾಗಿ ಸಿಕ್ಕಿಬೀಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಮತ್ತು ಆರ್‌ಎಸ್‌ಎಸ್ ರಾಷ್ಟ್ರವನ್ನು ವಿಭಜಿಸಲು ಪ್ರಯತ್ನಿಸುತ್ತಿವೆ. ಆದರೆ ಇಂಡಿಯಾ ಮೈತ್ರಿಕೂಟವು ದೇಶವನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದೆ ಎಂದು ಎಂದಿದ್ದಾರೆ.
ಮೋದಿ, ಶಾ ಮತ್ತು ಚುನಾವಣಾ ಆಯೋಗದ ಬಳಿ ಮತಕಳ್ಳತನಕ್ಕೆ ಸಂಬಂಧಿಸಿದಂತೆ ಯಾವುದೇ ಉತ್ತರವಿಲ್ಲ. ಏಕೆಂದರೆ ಸತ್ಯವು ಈಗ ಜನರ ಮುಂದೆ ಹೊರಬಂದಿದೆ. ಪ್ರಧಾನಿ ಮೋದಿ, ಅಮಿತ್ ಶಾ ಅವರು ಎಲ್ಲಿಗೆ ಬೇಕಾದರೂ ತೆರಳಬಹುದು. ಆದರೆ ಅಂತಿಮವಾಗಿ ಮತಗಳ್ಳತನದಲ್ಲಿ ತೊಡಗಿದ್ದಕ್ಕಾಗಿ ಸಿಕ್ಕಿಬೀಳುತ್ತಾರೆ ಎಂದು ಕಿಡಿಕಾರಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಬಿಹಾರದ ಯುವಕರಿಗೆ ಉದ್ಯೋಗ ಒದಗಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ
ಬಿಹಾರದ 121 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಉಳಿದ 122 ಸ್ಥಾನಗಳಿಗೆ ನವೆಂಬರ್ 11ರಂದು ಮತದಾನ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.