ADVERTISEMENT

ಬಿಹಾರ ಚುನಾವಣೆ ಫಲಿತಾಂಶ | ಯಾರ ಒತ್ತಡಕ್ಕೂ ಮಣಿದಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ

ಏಜೆನ್ಸೀಸ್
Published 10 ನವೆಂಬರ್ 2020, 17:20 IST
Last Updated 10 ನವೆಂಬರ್ 2020, 17:20 IST
ಉಪ ಚುನಾವಣಾ ಆಯುಕ್ತ ಚಂದ್ರಭೂಷಣ್ ಕುಮಾರ್ - ಎಎನ್‌ಐ‌ ಚಿತ್ರ
ಉಪ ಚುನಾವಣಾ ಆಯುಕ್ತ ಚಂದ್ರಭೂಷಣ್ ಕುಮಾರ್ - ಎಎನ್‌ಐ‌ ಚಿತ್ರ   

ಪಟ್ನಾ: ಯಾರ ಒತ್ತಡಕ್ಕೂ ಮಣಿದು ಚುನಾವಣಾ ಆಯೋಗ ಕೆಲಸ ಮಾಡುತ್ತಿಲ್ಲ. ಎಲ್ಲ ಅಧಿಕಾರಿಗಳು ಮತ್ತು ಒಟ್ಟು ವ್ಯವಸ್ಥೆಯು ಫಲಿತಾಂಶ ಘೋಷಣೆಗಾಗಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದು ಚುನಾವಣಾ ಆಯೋಗದ ಪ್ರಧಾನ ಕಾರ್ಯದರ್ಶಿ ಉಮೇಶ ಸಿನ್ಹಾ ಸ್ಪಷ್ಟನೆ ನೀಡಿದ್ದಾರೆ.

ಮತ ಎಣಿಕೆ ಮೇಲೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಭಾವ ಬೀರುತ್ತಿದ್ದಾರೆ ಎಂದು ಆರ್‌ಜಡಿ ಹಾಗೂ ಕಾಂಗ್ರೆಸ್ ನಾಯಕರು ಆರೋಪಿಸಿದ ಬೆನ್ನಲ್ಲೇ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

‘ಒಂದು ಗಂಟೆ ಹಿಂದೆ ರಾಜಕೀಯ ಪಕ್ಷವೊಂದರ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಾವು 119 ಕ್ಷೇತ್ರಗಳಲ್ಲಿ ಜಯಗಳಿಸಿರುವುದಾಗಿ ಪೋಸ್ಟ್ ಮಾಡಲಾಗಿತ್ತು. ಫಲಿತಾಂಶದ ಎಲ್ಲ ವಿವರಗಳೂ ಚುನಾವಣಾ ಆಯೋಗದ ಪೋರ್ಟಲ್‌ನಲ್ಲೇ ಲಭ್ಯವಿದೆ. ಈವರೆಗೂ 146 ಕ್ಷೇತ್ರಗಳ ಫಲಿತಾಂಶ ಘೋಷಿಸಲಾಗಿದೆ’ ಎಂದು ಉಪ ಚುನಾವಣಾ ಆಯುಕ್ತ ಚಂದ್ರಭೂಷಣ್ ಕುಮಾರ್ ತಿಳಿಸಿದ್ದಾರೆ.

ಮಧ್ಯರಾತ್ರಿ ಮತ್ತೊಮ್ಮೆ ಫಲಿತಾಂಶದ ವಿವರ ಅಪ್‌ಡೇಟ್ ಮಾಡಲಿದ್ದೇವೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.