
ಪ್ರಧಾನಿ ನರೇಂದ್ರ ಮೋದಿ , ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು
ಪಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಆರಂಭಿಕ ಟ್ರೆಂಡ್ ನೋಡಿದರೆ ಜನರು ಪ್ರಧಾನಿ ನರೇಂದ್ರ ಮೋದಿ ಜೊತೆಗಿದ್ದಾರೆ ಎಂಬುದನ್ನು ಸೂಚಿಸುತ್ತದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಶಾಖಪಟ್ಟಣದಲ್ಲಿ ಹೇಳಿದ್ದಾರೆ.
243 ಸದಸ್ಯ ಸಂಖ್ಯಾ ಬಲ ಹೊಂದಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಮತ್ತು ಆಡಳಿತಾರೂಢ ಮೈತ್ರಿಕೂಟದ ಭಾಗವಾಗಿರುವ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಕನಿಷ್ಠ 6 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಎಚ್‌ಎಎಂ ಮುಖ್ಯಸ್ಥ ಜೀತನ್ ರಾಮ್ ಮಾಂಝಿ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣಾ ಆಯೋಗದ ಪ್ರಕಾರ, ಇದುವರೆಗಿನ ಮತ ಎಣಿಕೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ 166 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಹುಮತಕ್ಕೆ ಅಗತ್ಯವಿರುವ 122 ಸ್ಥಾನಗಳನ್ನು ದಾಟಿದೆ.
ಬಿಹಾರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಮಹಾಘಟಬಂಧನ ಕೇವಲ 59 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನೂ ಹಲವು ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ ಫಲಿತಾಂಶ ತಮ್ಮ ಪರವಾಗುವ ನಿರೀಕ್ಷೆಯಲ್ಲಿ ಮಹಾಘಟಬಂಧನ ನಾಯಕರಿದ್ದಾರೆ.
‘ಸಮೀಕ್ಷೆಗಳು ಎನ್‌ಡಿಎಗೆ 160ಕ್ಕೂ ಹೆಚ್ಚು ಸ್ಥಾನಗಳು ಬರುವುದಾಗಿ ತೋರಿಸಿವೆ. ಆದರೆ, ಈಗ ಮತ ಎಣಿಕೆಯಲ್ಲಿ ಎಚ್‌ಎಎಂ ಈಗ ನಾಲ್ಕರಿಂದ ಐದು ಸ್ಥಾನಗಳಲ್ಲಿ ಮುಂದಿದೆ. ನಾವು ಕನಿಷ್ಠ 6 ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದು ಮಾಂಝಿ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.