ADVERTISEMENT

Bihar Results: ಅಭೂತಪೂರ್ವ ಜಯದತ್ತ ಎನ್‌ಡಿಎ; ಮಹಾಘಟಬಂಧನಕ್ಕೆ ಹೀನಾಯ ಸೋಲು

ಪಿಟಿಐ
Published 14 ನವೆಂಬರ್ 2025, 7:33 IST
Last Updated 14 ನವೆಂಬರ್ 2025, 7:33 IST
   

ಪಟ್ನಾ: ಬಿಹಾರ ವಿಧಾಸನಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಎನ್‌ಡಿಎ ಮೈತ್ರಿಕೂಟ ಭಾರಿ ಗೆಲುವಿನತ್ತ ಮುನ್ನಡೆದಿದೆ.

ಅಲ್ಲದೆ ರಾಜ್ಯದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಹಾದಿಯಲ್ಲಿದೆ ಎಂದು ಚುನಾವಣಾ ಆಯೋಗದ ಫಲಿತಾಂಶ ವರದಿಯು ಸೂಚಿಸುತ್ತದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 190ಕ್ಕೂ ಅಧಿಕ ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ ಕಾಯ್ದುಕೊಂಡಿದೆ.

ADVERTISEMENT

2025ರ ಚುನಾವಣೆಯಲ್ಲಿ ಬಿಜೆಪಿ 101 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಈ ಪೈಕಿ 80ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಆ ಮೂಲಕ ಪ್ರಬಲ ರಾಜಕೀಯ ಶಕ್ತಿಯಾಗಿ ತನ್ನ ಬಲ ಪ್ರದರ್ಶನ ಮಾಡಿದೆ.

ದೆಹಲಿ, ಮಹಾರಾಷ್ಟ್ರ, ಹರಿಯಾಣದ ಬಳಿಕವೀಗ ಬಿಹಾರದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ.

ಅತ್ತ ಜೆಡಿಯು 70ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. 2020ರಲ್ಲಿ ಜೆಡಿಯು 43 ಸ್ಥಾನಗಳನ್ನು ಪಡೆದಿತ್ತು.

ಇದರೊಂದಿಗೆ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ನಾಯಕತ್ವಕ್ಕೆ ವ್ಯಾಪಕ ಮನ್ನಣೆ ಸಿಕ್ಕಂತಾಗಿದೆ.

ಮಹಾಘಟಬಂಧನ ಮೈತ್ರಿಯ ಪ್ರಮುಖ ಪಕ್ಷವಾಗಿರುವ ಆರ್‌ಜೆಡಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ 32 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಗಳಿಸುವ ಮೂಲಕ ಕಳಪೆ ಸಾಧನೆ ಮಾಡಿದೆ.

ಕಾಂಗ್ರೆಸ್‌ನ ಸಾಧನೆ ಇದಕ್ಕೂ ಕಳಪೆ ಮಟ್ಟದಲ್ಲಿದೆ. 61 ಸ್ಥಾನಗಳಲ್ಲಿ ಸ್ಪರ್ಧಸಿದ್ದ ಕಾಂಗ್ರೆಸ್, 5ಕ್ಕೂ ಕಡಿಮೆ ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಒಟ್ಟಾರೆಯಾಗಿ ಬಿಹಾರದಲ್ಲಿ ಎನ್‌ಡಿಎ ಸರ್ಕಾರದ ಅಧಿಕಾರ ಮುಂದುವರಿಯುವುದು ನಿಚ್ಚಳವೆನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.