ಪಟ್ನಾ: ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ‘ಜನಶಕ್ತಿ ಜನತಾ ದಳ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡಿರುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಬಿಹಾರದ ಅಭಿವೃದ್ಧಿಗಾಗಿ ಹೋರಾಡಲು ಹೊಸ ಪಕ್ಷ ಘೋಷಣೆ ಮಾಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ತೇಜ್ ಪ್ರತಾಪ್ ಅವರೇ ಈ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.
'ಜನಶಕ್ತಿ ಜನತಾ ದಳ‘ ಪಕ್ಷದ ಚಿಹ್ನೆ ‘ಕಪ್ಪು ಹಲಗೆ‘ ಆಗಿರಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಪಕ್ಷ ನೋಂದಾಣಿಯಾಗಿಲ್ಲ ಹಾಗೂ ಯಾವುದೇ ಚಿಹ್ನೆಯನ್ನು ಅಧಿಕೃತವಾಗಿ ಮಂಜೂರು ಮಾಡಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ತೇಜ್ ಪ್ರತಾಪ್ ಯಾದವ್ ಅವರನ್ನು ಆರ್‌ಜೆಡಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಸಣ್ಣ ಪಕ್ಷಗಳೊಂದಿಗೆ ನಮ್ಮ ಪಕ್ಷ ಮೈತ್ರಿ ಮಾಡಿಕೊಂಡಿದೆ ಎಂದು ತೇಜ್ ಪ್ರತಾಪ್ ಹೇಳಿದ್ದರು.
ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಈ ವರ್ಷದ ಕೊನೆಯಲ್ಲಿ ನಡೆಯಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.