ಚುನಾವಣೆ
ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷ ಹೇಳಿದೆ.
ಮಿತ್ರ ಪಕ್ಷಗಳಾದ ಕಾಂಗ್ರೆಸ್ ಹಾಗೂ ಆರ್‌ಜೆಡಿ ಪಿತೂರಿಯೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕಾರಣ ಎಂದು ಆರೋಪಿಸಿದೆ.
ಮಹಾಘಟಬಂಧನದ ಭಾಗವಾಗಿರುವ ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ, ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಇದರೊಂದಿಗೆ 'ಇಂಡಿಯಾ' ಮೈತ್ರಿಕೂಟದಲ್ಲಿ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ.
ಕಾಂಗ್ರೆಸ್, ಆರ್‌ಜೆಡಿ ಜೊತೆಗಿನ ಮೈತ್ರಿಯನ್ನು ಮರುಪರಿಶೀಲಿಸುವುದಾಗಿ ಜೆಎಂಎಂ ನಾಯಕ ಸುದಿವ್ಯ ಕುಮಾರ್ ಹೇಳಿಕೆ ನೀಡಿದ್ದು, ನಂಬಿಕೆ ದ್ರೋಹಕ್ಕೆ ತಕ್ಕ ಉತ್ತರ ನೀಡುವುದಾಗಿ ಹೇಳಿದ್ದಾರೆ.
ಸೀಟು ಹಂಚಿಕೆ ಮಾತುಕತೆ ಮುರಿದು ಬಿದ್ದ ಕಾರಣ ಪಕ್ಷವು ಆರು ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ ಎರಡು ದಿನಗಳಲ್ಲೇ ಈ ಹೇಳಿಕೆ ಬಂದಿದೆ.
ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.