ADVERTISEMENT

Bihar: ಅವಕಾಶವಾದಿ ಆಡಳಿತಗಾರರಿಗೆ ಪಾಠ ಕಲಿಸಲು ಸುವರ್ಣಾವಕಾಶ; ಮತದಾರರಿಗೆ ಖರ್ಗೆ

ಪಿಟಿಐ
Published 6 ನವೆಂಬರ್ 2025, 4:33 IST
Last Updated 6 ನವೆಂಬರ್ 2025, 4:33 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ನವದೆಹಲಿ: ‘ಭ್ರಷ್ಟಾಚಾರ, ದುರಾಡಳಿತ ಮತ್ತು ಜಂಗಲ್‌ರಾಜ್‌ ಅನ್ನೇ ಅಭಿವೃದ್ಧಿ ಎಂದು ಬ್ರಾಂಡ್‌ ಮಾಡುವ ಮೂಲಕ ದ್ರೋಹ ಬಗೆದ ‘ಅವಕಾಶವಾದಿ ಆಡಳಿತಗಾರರಿಗೆ’ ಪಾಠ ಕಲಿಸಲು ಸುವರ್ಣಾವಕಾಶ ಬಂದಿದೆ. ರಾಜ್ಯದಲ್ಲಿ ಬದಲಾವಣೆ ತರಲು ಮತಚಲಾಯಿಸಿ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತದಾರರಿಗೆ ಹೇಳಿದ್ದಾರೆ.

243 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ 3.75 ಕೋಟಿ ಮತದಾರರು ಮತದಾನ ಮಾಡಲಿದ್ದು, 1,314 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 

ADVERTISEMENT

‘ಪ್ರಜಾಪ್ರಭುತ್ವದ ಜನ್ಮಸ್ಥಳವಾದ ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ಬಿಹಾರದ ಪ್ರತಿಯೊಬ್ಬ ಮತದಾರರೂ ತಮ್ಮ ಸಾಂವಿಧಾನಿಕ ಹಕ್ಕನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಲಾಯಿಸಿ 20 ವರ್ಷಗಳ ನಂತರ ರಾಜ್ಯಕ್ಕೆ ಬದಲಾವಣೆಯ ಹೊಸ ದಿಕ್ಕನ್ನು ನೀಡಬೇಕೆಂದು ಮನವಿ ಮಾಡುತ್ತೇನೆ. ನಾವು ಬಿಹಾರವನ್ನು ನಿರ್ಮಿಸಬೇಕು, ರಾಜ್ಯದ ಯುವಕರ ಭವಿಷ್ಯ ಸುರಕ್ಷಿತವಾಗಿರುವಂತೆ ನೋಡಿಕೊಳ್ಳಬೇಕು. ಅವರು ನಿರುದ್ಯೋಗ ಮತ್ತು ವಲಸೆಯ ಪಿಡುಗನ್ನು ಅನುಭವಿಸಬೇಕಾಗಿಲ್ಲ’ ಎಂದು ಖರ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

'ನಿಮ್ಮ ಭವಿಷ್ಯವನ್ನು ನಿರ್ಧರಿಸುವುದು ನಿಮ್ಮ ಕೈಯಲ್ಲೇ ಇದೆ. ಉದ್ಯೋಗ, ಶಿಕ್ಷಣ, ಆರೋಗ್ಯ, ರಾಜ್ಯದ ಉತ್ತಮ ಅಭಿವೃದ್ಧಿಗಾಗಿ ಮತ್ತು ಹಕ್ಕುಗಳನ್ನು ರಕ್ಷಿಸಲು ಮತ ಚಲಾಯಿಸಿ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ’ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.