ADVERTISEMENT

ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರಲ್ಲ: ಎನ್‌ಡಿಎ ವಿರುದ್ಧ ಖರ್ಗೆ ವಾಗ್ದಾಳಿ

ಪಿಟಿಐ
Published 4 ನವೆಂಬರ್ 2025, 11:07 IST
Last Updated 4 ನವೆಂಬರ್ 2025, 11:07 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

(ಪಿಟಿಐ ಚಿತ್ರ)

ನವದೆಹಲಿ: ಬಿಹಾರದಲ್ಲಿ ಎನ್‌ಡಿಎ ಸರ್ಕಾರದ ಅಡಿಯಲ್ಲಿ ಮಹಿಳೆಯರ ಭದ್ರತೆಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ADVERTISEMENT

ಅಲ್ಲದೆ ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ ಮೈತ್ರಿಯು ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕ ಏಳಿಗೆಗಾಗಿ ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ನಾವು ಚುನಾವಣೆಯಲ್ಲಿ ಮತ ಗಳಿಸಲು ಭರವಸೆ ನೀಡುತ್ತಿಲ್ಲ. ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿದೆ ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಬಿಜೆಪಿ-ಜೆಡಿಯು 20 ವರ್ಷಗಳಿಂದ ಅಧಿಕಾರದಲ್ಲಿದೆ. ಆದರೆ ಇಂದಿಗೂ ಮೋದಿಯ ಬಿಹಾರದಲ್ಲಿ ಹೆಣ್ಣುಮಕ್ಕಳು ಸುರಕ್ಷಿತರಲ್ಲ ಎಂದು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಖರ್ಗೆ ಪೋಸ್ಟ್ ಮಾಡಿದ್ದಾರೆ.

ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಶೇ 70ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಶೇ 40ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಎನ್‌ಎಫ್‌ಎಚ್‌ಎಸ್ ಅಂಕಿ ಉಲ್ಲೇಖಿಸಿ ಖರ್ಗೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.