ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಪ್ರಶಾಂತ್ ಕಿಶೋರ್ ನೇತೃತ್ವದ ‘ಜನ ಸುರಾಜ್‘ ಪಕ್ಷ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ಚುನಾವಣೆ ಚಾಣಕ್ಷ ಎಂದೇ ಖ್ಯಾತರಾಗಿದ್ದ ಪ್ರಶಾಂತ್ ಕಿಶೋರ್ ಇದೀಗ ರಾಜಕಾರಣಿಯಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ತಮ್ಮ ಮೊದಲ ಪಟ್ಟಿಯಲ್ಲಿ ಪ್ರಾಮಾಣಿಕ ವ್ಯಕ್ತಿಗಳಿಗೆ ಮಾತ್ರ ಪಕ್ಷದ ಟಿಕೇಟ್ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.
ಪ್ರಶಾಂತ್ ಕಿಶೋರ್ ಅವರು ಮೊದಲ ಪಟ್ಟಿಯಲ್ಲಿ 51 ಅಭ್ಯರ್ಥಿಗಳಿಗೆ ಟಿಕೇಟ್ ನೀಡಿದ್ದಾರೆ. ಇದರಲ್ಲಿ ಶೇ 16 ರಷ್ಟು ಮುಸ್ಲಿಂ ಅಭ್ಯರ್ಥಿಗಳು ಶೇ 17ರಷ್ಟು ಅತಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಣೆ ಹಾಕಿದ್ದಾರೆ.
ಗಣಿತಜ್ಞರು, ಮಾಜಿ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಕಾರ್ಪೋರೇಟ್ ಸಿಇಒಗಳು ಮತ್ತು ವೈದ್ಯರು ಸೇರಿದಂತೆ ಒಟ್ಟು 51 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ರಾಜಕೀಯದಲ್ಲಿರುವ ಭ್ರಷ್ಟಾಚಾರದ ವಿರುದ್ಧ ಸದಾ ಧ್ವನಿಯಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಅವರ ಶುದ್ಧಹಸ್ತವನ್ನು ಪ್ರಮುಖ ಅಂಶವಾಗಿ ಪರಿಗಣಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.