ADVERTISEMENT

Bihar Elections: 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌ಜೆಡಿ

ಪಿಟಿಐ
Published 20 ಅಕ್ಟೋಬರ್ 2025, 9:02 IST
Last Updated 20 ಅಕ್ಟೋಬರ್ 2025, 9:02 IST
<div class="paragraphs"><p>ಬಿಹಾರ ಚುನಾವಣೆ</p></div>

ಬಿಹಾರ ಚುನಾವಣೆ

   

(ಚಿತ್ರ ಕೃಪೆ: X/@ECISVEEP)

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಆರ್‌ಜೆಡಿ ಪಕ್ಷವು 143 ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಸೋಮವಾರ) ಬಿಡುಗಡೆ ಮಾಡಿದೆ.

ADVERTISEMENT

ಅಲ್ಲದೆ ಐದು ಸ್ಥಾನಗಳಲ್ಲಿ 'ಇಂಡಿಯಾ' ಮೈತ್ರಿಕೂಟದ ಅಭ್ಯರ್ಥಿಗಳ ವಿರುದ್ಧವೇ ಸ್ಪರ್ಧೆ ನಡೆಸಲು ನಿರ್ಧರಿಸಿದೆ.

ಇಂದು (ಅ.20) ಎರಡನೇ ಹಾಗೂ ಅಂತಿಮ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಈ ನಡುವೆ ಕೆಲವೇ ಗಂಟೆಗಳ ಮೊದಲು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ವೈಶಾಲಿ, ಲಾಲ್‌ಗಂಜ್, ಕಹಲ್‌ಗಾಂವ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿರುದ್ಧ ಮತ್ತು ತಾರಾಪುರ ಮತ್ತು ಗೌರ ಬೋರಂನಲ್ಲಿ ಮಾಜಿ ಸಚಿವ ಮುಕೇಶ್ ಸಾಹ್ನಿ ಅವರ ವಿಕಾಸಶೀಲ ಇನ್ಸಾನ್ ಪಕ್ಷದ ಅಭ್ಯರ್ಥಿಗಳ ವಿರುದ್ಧ ಆರ್‌ಜೆಡಿ ಸ್ಪರ್ಧಿಸಲಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.