ADVERTISEMENT

ಆರ್‌ಜೆಡಿ-ಕಾಂಗ್ರೆಸ್ ನಡುವೆಯೇ ಸ್ಪರ್ಧೆ: 'ಇಂಡಿಯಾ' ಮೈತ್ರಿಗೆ ಚಿರಾಗ್ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2025, 10:36 IST
Last Updated 20 ಅಕ್ಟೋಬರ್ 2025, 10:36 IST
ಚಿರಾಗ್ ಪಾಸ್ವಾನ್
ಚಿರಾಗ್ ಪಾಸ್ವಾನ್   

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಆರ್‌ಜೆಡಿ 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ. ಅಲ್ಲದೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಸೇರಿದಂತೆ ಐದು ಕ್ಷೇತ್ರಗಳಲ್ಲಿ 'ಇಂಡಿಯಾ' ಮೈತ್ರಿಕೂಟದ ವಿರುದ್ಧವೇ ಅಭ್ಯರ್ಥಿಗಳನ್ನು ಕಣಕ್ಕಳಿಸಿದೆ.

ಈ ಸಂಬಂಧ ಕೇಂದ್ರ ಸಚಿವ, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಚಿರಾಗ್ ಪಾಸ್ವಾನ್ ವಾಗ್ದಾಳಿ ನಡೆಸಿದ್ದು, ಇದು ಮಹಾಘಟಬಂಧನದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ADVERTISEMENT

'ಮಹಾಘಟಬಂಧನ ಮೈತ್ರಿಯು ಒಡೆಯುವ ಅಂಚಿನಲ್ಲಿದ್ದು, ಇಂತಹ ಘಟನೆಯನ್ನು ನಾನೆಂದೂ ನೋಡಿಲ್ಲ. ಮಹಾಘಟಬಂಧನದ ನಾಯಕರು ಒಂದೇ ಕ್ಷೇತ್ರದಿಂದ ಅನೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಹುದು ಎಂಬ ಭ್ರಮೆಯಲ್ಲಿದ್ದಾರೆ. ಸ್ನೇಹಪರ ಸ್ಪರ್ಧೆ ಎಂಬುದೇ ಇಲ್ಲ' ಎಂದು ವ್ಯಂಗ್ಯವಾಡಿದ್ದಾರೆ.

'ಈಗ ನಮಗೆ ಕಠಿಣ ಸವಾಲು ಎದುರಾಗಲಿದೆ ಎಂದು ನಿರೀಕ್ಷೆ ಮಾಡಿದ ಕ್ಷೇತ್ರಗಳಲ್ಲೂ ಸುಲಭ ಜಯ ಸಾಧಿಸಲಿದ್ದೇವೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.