ಪಟ್ನಾ/ನವದೆಹಲಿ: ಚುನಾವಣಾ ಆಯೋಗವು ಮಂಗಳವಾರ ಬಿಹಾರದ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದ್ದು, ಅದರಲ್ಲಿ 7.42 ಕೋಟಿ ಮತದಾರರ ವಿವರಗಳಿವೆ.
ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ರಾಜ್ಯದಲ್ಲಿ ಒಟ್ಟು 47 ಲಕ್ಷ ಮತದಾರರು ಕಡಿಮೆಯಾಗಿದ್ದಾರೆ. ಆದರೆ, ಎಸ್‌ಐಆರ್‌ನ ಕರಡು ಪಟ್ಟಿಗಿಂತ (7.24 ಕೋಟಿ) ಅಂತಿಮ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳು ಸೇರ್ಪಡೆಯಾಗಿವೆ.
ಆಗಸ್ಟ್‌ನಲ್ಲಿ ಪ್ರಕಟಿಸಿದ್ದ ಕರಡು ಪಟ್ಟಿಯಲ್ಲಿ ಗೈರುಹಾಜರಿ, ಸ್ಥಳಾಂತರ ಅಥವಾ ಮೃತಪಟ್ಟಿದ್ದಾರೆ ಎಂಬ ಕಾರಣಗಳನ್ನು ನೀಡಿ 65 ಲಕ್ಷ ಮತದಾರರ ಹೆಸರುಗಳನ್ನು ಹೊರಗಿಡಲಾಗಿತ್ತು.
ಕರಡುಪಟ್ಟಿಯಲ್ಲಿ ಬಿಟ್ಟುಹೋಗಿದ್ದ 21.53 ಲಕ್ಷ ಅರ್ಹ ಮತದಾರರ ಹೆಸರುಗಳನ್ನು ಅಂತಿಮ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.