ADVERTISEMENT

ಬಿಹಾರ | ಪ್ರಶ್ನೆ ಪತ್ರಿಕೆ ಸೋರಿಕೆ: ಮತ್ತೆ ಐವರ ಬಂಧನ

ಪಿಟಿಐ
Published 21 ಏಪ್ರಿಲ್ 2024, 4:52 IST
Last Updated 21 ಏಪ್ರಿಲ್ 2024, 4:52 IST
ಪ್ರಶ್ನೆ ಪತ್ರಿಕೆ ಸೋರಿಕೆ
ಪ್ರಶ್ನೆ ಪತ್ರಿಕೆ ಸೋರಿಕೆ   

ಸಾಂದರ್ಭಿಕ ಚಿತ್ರ 

ಪಟ್ನಾ: ಶಿಕ್ಷಕರ ನೇಮಕಾತಿ ಪರೀಕ್ಷೆಯ (ಟಿಆರ್‌ಇ) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮತ್ತೆ ಐವರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್‌‌ನಲ್ಲಿ ನಡೆದ ಟಿಆರ್‌ಇ-3 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಉಜ್ಜಯಿನಿ ಪ್ರದೇಶದಿಂದ ಒಂದೇ ಗ್ಯಾಂಗ್‌ನ ಭಾಗವಾಗಿರುವ ಐವರನ್ನು ಬಂಧಿಸಲಾಗಿದೆ ಎಂದು ಆರ್ಥಿಕ ಅಪರಾಧಗಳ ಘಟಕ (ಇಒಯು) ತಿಳಿಸಿದೆ.

ADVERTISEMENT

ಆರೋಪಿಗಳನ್ನು ಪಟ್ನಾ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕೋರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪದ ಬೆನ್ನಲ್ಲೇ ಟಿಆರ್‌ಇ-3 ಪರೀಕ್ಷೆಯನ್ನು ಬಿಹಾರ ಲೋಕಸೇವಾ ಆಯೋಗವು (ಬಿಪಿಎಸ್‌ಸಿ) ರದ್ದುಗೊಳಿಸಿದೆ. ಹೊಸ ದಿನಾಂಕವನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.

ಮಾರ್ಚ್ 15ರಂದು 415 ಕೇಂದ್ರಗಳಲ್ಲಾಗಿ ಪರೀಕ್ಷೆ ನಡೆದಿತ್ತು. ಸುಮಾರು 3.75 ಲಕ್ಷ ಆಕಾಂಕ್ಷಿಗಳು ಪರೀಕ್ಷೆ ಬರೆದಿದ್ದರು. ಮಾರ್ಚ್ 16ರಂದು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಇಒಯು ಎಫ್‌ಐಆರ್ ದಾಖಲಿಸಿತ್ತು.

ಜಾರ್ಖಂಡ್‌ನ ವಿವಿಧ ಸ್ಥಳಗಳಲ್ಲಿ ಇಒಯು ವಿಶೇಷ ತಂಡವು ದಾಳಿ ನಡೆಸಿತ್ತಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ 266 ಮಂದಿಯನ್ನು ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.