ADVERTISEMENT

ಬಿಹಾರದ ಆರ್‌ಜೆಡಿ ಮಾಜಿ ರಾಜ್ಯ ಕಾರ್ಯದರ್ಶಿಗೆ ಗುಂಡಿಕ್ಕಿ ಹತ್ಯೆ

ಏಜೆನ್ಸೀಸ್
Published 4 ಅಕ್ಟೋಬರ್ 2020, 8:51 IST
Last Updated 4 ಅಕ್ಟೋಬರ್ 2020, 8:51 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಪಟ್ನಾ: ಬಿಹಾರ ಚುನಾವಣೆ ಸಮೀಸುತ್ತಿರುವ ಬೆನ್ನಲ್ಲೇ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಮಾಜಿ ರಾಜ್ಯ ಕಾರ್ಯದರ್ಶಿ ಶಕ್ತಿ ಮಲಿಕ್‌ ಅವರನ್ನು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಈ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಡಿವೈಎಸ್‌ಪಿ ಆನಂದ್‌ ಪಾಂಡೆ, 'ಶಕ್ತಿ ಮಲಿಕ್ ಅವರನ್ನು ಇಂದು(ಭಾನುವಾರ) ಬೆಳಿಗ್ಗೆ ಮೂವರು ಆರೋಪಿಗಳು ಗುಂಡಿಕ್ಕಿ ಕೊಂದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸಲಾಗುತ್ತಿದೆ' ಎಂದು ತಿಳಿಸಿದ್ದಾರೆ.

ಬಿಹಾರ ಚುನಾವಣೆಯು ಅ. 28ರಂದು ಮೊದಲ ಹಂತ, ನ.3 ರಂದು ಎರಡನೇ ಹಂತ, ನ.7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ನ. 10ರಂದು ಫಲಿತಾಂಶ ಪ್ರಕಟವಾಗಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.