
ಪಿಟಿಐ
ಪಟ್ನಾ (ಪಿಟಿಐ): ಪಟ್ನಾದಲ್ಲಿ ನೀಟ್ ಆಕಾಂಕ್ಷಿ ಯುವತಿಯೊಬ್ಬರು ಮೃತಪಟ್ಟಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಹಾರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
‘ಪ್ರಸ್ತುತ ಬಿಹಾರದ ವಿಶೇಷ ತನಿಖಾ ತಂಡವು(ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದ್ದು, ಸಮಗ್ರ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಲಾಗಿದೆ’ ಎಂದು ಬಿಹಾರ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಶನಿವಾರ ತಿಳಿಸಿದ್ದಾರೆ.
ಜೆಹಾನಾಬಾದ್‌ನ ಯುವತಿ ಪಟ್ನಾದ ವಸತಿ ನಿಲಯವೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಜನವರಿ 11ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
‘ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಅಪರಾಧಿಗಳನ್ನು ರಕ್ಷಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ’ ಎಂದು ಮೃತ ಯುವತಿಯ ಪೋಷಕರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.