ADVERTISEMENT

ಬಿಹಾರದ 25 ಲಕ್ಷ ಮಹಿಳೆಯರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಿದ ನಿತೀಶ್ ಸರ್ಕಾರ

ಪಿಟಿಐ
Published 16 ಫೆಬ್ರುವರಿ 2026, 7:30 IST
Last Updated 16 ಫೆಬ್ರುವರಿ 2026, 7:30 IST
   

ಪಟ್ನಾ: ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ ಅಡಿಯಲ್ಲಿ ಬಿಹಾರದ ನಿತೀಶ್ ಕುಮಾರ್ ಸರ್ಕಾರವು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ₹10 ಸಾವಿರ ಜಮೆ ಮಾಡಲಾಗಿದೆ.

ಮಹಿಳಾ ಸಬಲೀಕರಣ ಹಾಗೂ ಸ್ವ–ಉದ್ಯೋಗಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಯನ್ನು ಜಾರಿಗೊಳಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್‌ನಲ್ಲಿ ಯೋಜನೆಗೆ ಚಾಲನೆ ನೀಡಿದ್ದರು.

ಇದುವರೆಗೂ ರಾಜ್ಯದ 1.81 ಕೋಟಿ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಅವರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಲಾಗಿದೆ. ಇದಕ್ಕಾಗಿ ₹2500 ಕೋಟಿ ವೆಚ್ಚಮಾಡಲಾಗಿದೆ. ಇದನ್ನು ಸದ್ಭಳಕೆ ಮಾಡಿಕೊಂಡ ಮಹಿಳಾ ಉದ್ಯಮಿಗಳಿಗೆ, ಅವರ ಉದ್ಯಮವನ್ನು ವಿಸ್ತರಿಸಲು ₹2 ಲಕ್ಷ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಅಡಿಯಲ್ಲಿ ಉದ್ಯಮಗಳನ್ನು ಸ್ಥಾಪಿಸಿರುವ ಮಹಿಳೆಯರಿಗೆ ₹2 ಲಕ್ಷದವರೆಗೆ ಹಣಕಾಸು ನೆರವು ಒದಗಿಸುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.