ನಿತೀಶ್ ಕುಮಾರ್
ಪಟ್ನಾ(ಬಿಹಾರ): ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಹಿರಿಯ ನಾಗರಿಕರು, ವಿಧವೆಯರು ಮತ್ತು ಅಂಗವಿಕಲರ ಮಾಸಿಕ ಪಿಂಚಣಿಯನ್ನು ₹700ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿಯಲ್ಲಿ ರಾಜ್ಯದ ವೃದ್ಧರು, ಅಂಗವಿಕಲರು ಮತ್ತು ವಿಧವೆಯರು ಈಗ ₹400ರ ಬದಲು ₹1,100 ಪಡೆಯುತ್ತಾರೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಜುಲೈನಿಂದಲೇ ಇದು ಅನುಷ್ಠಾನವಾಗಲಿದೆ’ ಎಂದು ತಿಳಿಸಿದ್ದಾರೆ.
ಪ್ರತಿ ತಿಂಗಳ 10ನೇ ದಿನದಂದು ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಪಿಂಚಣಿ ಮೊತ್ತವನ್ನು ಕಳುಹಿಸಲಾಗುವುದು ಎಂದೂ ಹೇಳಿದ್ದಾರೆ.
‘ಸರ್ಕಾರದ ಈ ನಿರ್ಧಾರವು ಫಲಾನುಭವಿಗಳಿಗೆ ಸಹಾಯ ಮಾಡುತ್ತದೆ ಮತ್ತು ಅವರು ಗೌರವಯುತ ಜೀವನವನ್ನು ನಡೆಸುವುದನ್ನು ಖಚಿತಪಡಿಸುತ್ತದೆ. ಇದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಬಂದನಾ ಪ್ರಿಯಾಶಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಪಿಂಚಣಿ ಯೋಜನೆಯ ಒಟ್ಟು ಫಲಾನುಭವಿಗಳ ಸಂಖ್ಯೆ 1.96 ಕೋಟಿ ಇದೆ.
ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.