ADVERTISEMENT

ಬಿಹಾರ: ಮದುಮಗನಿಗೆ ಕೋವಿಡ್, ಮದುವೆಯಲ್ಲಿ ಪಾಲ್ಗೊಂಡಿದ್ದ 95 ಮಂದಿಗೆ ಸೋಂಕು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜೂನ್ 2020, 15:55 IST
Last Updated 30 ಜೂನ್ 2020, 15:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಟ್ನಾ: ಬಿಹಾರದ ಗ್ರಾಮವೊಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 95 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಗುರುಗ್ರಾಮದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಯುವಕ ವಿವಾಹದ ಬಳಿಕ ಅನಾರೋಗ್ಯದಿಂದ ಮೃತಪಟ್ಟಿದ್ದ. ಆದರೆ, ಆತನಿಗೆ ರೋಗ ಲಕ್ಷಣವಿಲ್ಲದೇ ಇದ್ದುದರಿಂದ ಕೋವಿಡ್ ಪರೀಕ್ಷೆ ನಡೆಸದೇ ಅಂತ್ಯಸಂಸ್ಕಾರ ನಡೆಸಲಾಗಿತ್ತು.

ಈ ವಿಚಾರ ಸ್ಥಳೀಯಾಡಳಿತದ ಗಮನಕ್ಕೆ ಬಂದು ಮದುಮಗನ ನಿಕಟ ಸಂಬಂಧಿಕರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 15 ಮಂದಿಗೆ ಕೊರೊನಾ ತಗುಲಿರುವುದು ಜೂನ್ 15ರಂದು ದೃಢಪಟ್ಟಿತ್ತು.

ಇದಾದ ಬಳಿಕ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಮಾಡಿ ಪರೀಕ್ಷೆಗೆ ಒಳಪಡಿಸಲಾಯಿತು. ಜೂನ್ 19ರಂದು ಉಳಿದ 80 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.