ADVERTISEMENT

ಅಪಹರಣ ಆರೋಪ: ಬಿಹಾರದ ಸಚಿವ ಕಾರ್ತಿಕ್ ಕುಮಾರ್ ರಾಜೀನಾಮೆ

ಪಿಟಿಐ
Published 1 ಸೆಪ್ಟೆಂಬರ್ 2022, 1:48 IST
Last Updated 1 ಸೆಪ್ಟೆಂಬರ್ 2022, 1:48 IST
ನಿತೀಶ್ ಕುಮಾರ್
ನಿತೀಶ್ ಕುಮಾರ್    

ಪಾಟ್ನ: 2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಆರ್‌ಜೆಡಿ ಎಂಎಲ್‌ಸಿ ಕಾರ್ತಿಕ್ ಕುಮಾರ್ ಅವರು ಕಾನೂನು ಸಚಿವರಾಗಿದ್ದರು. ಆದರೆ ಕಬ್ಬು ಉದ್ಯಮ ಸಚಿವರಾಗಿ ಖಾತೆ ಬದಲಾಯಿಸಿದ್ದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಚಿವರ ರಾಜೀನಾಮೆ ಪತ್ರವನ್ನು ಬಿಹಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಂದಾಯ ಸಚಿವ ಅಲೋಕ್ ಕುಮಾರ್ ಮೆಹ್ತಾ ಅವರಿಗೆ ಕಬ್ಬು ಉದ್ಯಮ ಸಚಿವಾಲಯದ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.