
ಮಧುಬನಿ: ಮಲಗಿದ್ದ ಪತ್ನಿ, ಇಬ್ಬರು ಮಕ್ಕಳು ಹಾಗೂ ಅತ್ತೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಜಹಾಂಗೀರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸುಖೇತ್ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲೇ ಇದ್ದ ಇನ್ನಿಬ್ಬರು ಮಕ್ಕಳು ಬೇರೊಂದು ಕೋಣೆಯಲ್ಲಿ ಅಡಗಿಕುಳಿತು ಜೀವ ಉಳಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
‘ಘಟನೆಯ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ’ ಎಂದು ಜಹಾಂಗಿರ್‌ಪುರದ ಉಪ ಪೊಲೀಸ್ ವರಿಷ್ಠಾಧಿಕಾರಿ ಪವನ್ ಕುಮಾರ್ ತಿಳಿಸಿದ್ದಾರೆ.
ಪತ್ನಿಯ ತಾಯಿಯ ಮನೆಯಲ್ಲೇ ಪತಿ ಹಾಗೂ ಮಕ್ಕಳು ಕೆಲ ದಿನದಿಂದ ವಾಸವಿದ್ದರು. ಕೃತ್ಯದ ಹಿಂದಿನ ಕಾರಣ ತಿಳಿದುಬರಬೇಕಷ್ಟೇ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.