
ಪಿಟಿಐ
ಗೋಪಾಲಗಂಜ್ (ಬಿಹಾರ): ಕೇವಲ ಶೇ 3ರಷ್ಟು ಜನಸಂಖ್ಯೆಯಿರುವ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನದ ಭರವಸೆ ನೀಡುವುದಾದರೆ, ಶೇ 17ರಷ್ಟು ಜನಸಂಖ್ಯೆಯಿರುವ ಮುಸ್ಲಿಮರ ಪ್ರತಿನಿಧಿ ರಾಜ್ಯದ ಮುಖ್ಯಮಂತ್ರಿ ಯಾಕಾಗಬಾರದು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಮಂಗಳವಾರ ಪ್ರಶ್ನಿಸಿದ್ದಾರೆ.
ಬಿಹಾರದ 32 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಮಂಗಳವಾರ ಆರಂಭಿಸಿ ಇಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಯಾವುದೇ ಭರವಸೆ ನೀಡದ ಆಡಳಿತಾರೂಢ ಎನ್‌ಡಿಎ ಮತ್ತು ವಿಪಕ್ಷ ‘ಇಂಡಿಯಾ’ ಮೈತ್ರಿಯನ್ನು ಅವರು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.