ADVERTISEMENT

ಬಿಹಾರ | ಅಸಹಾಯಕ, ಭಯದ ನೆರಳಿನಿಂದ ಮಹಿಳೆಯರನ್ನು ಮೇಲೆತ್ತಿದ NDA: ಸ್ಮೃತಿ ಇರಾನಿ

ಪಿಟಿಐ
Published 4 ನವೆಂಬರ್ 2025, 6:59 IST
Last Updated 4 ನವೆಂಬರ್ 2025, 6:59 IST
ಸ್ಮೃತಿ ಇರಾನಿ
ಸ್ಮೃತಿ ಇರಾನಿ   

ಪಟ್ನಾ: ಬಿಹಾರದ ಎನ್‌ಡಿಎ ಸರ್ಕಾರವು ಮಹಿಳೆಯರನ್ನು ಅಸಹಾಯಕತೆ ಮತ್ತು ಭಯದ ನೆರಳಿನಿಂದ ಮೇಲೆತ್ತಿದೆ ಎಂದು ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮಂಗಳವಾರ ಪ್ರತಿಪಾದಿಸಿದ್ದಾರೆ.

ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿರುವ ಅವರು, ‘ಜನ್‌ ಧನ್‌ ಯೋಜನೆ’ ಮೂಲಕ ಬಿಹಾರದ 3 ಕೋಟಿಗೂ ಹೆಚ್ಚು ಮಹಿಳೆಯರಿಗೆ ನೆರವು ಸಿಕ್ಕಿದೆ. ಜತೆಗೆ 1.16 ಕೋಟಿ ಮಹಿಳೆಯರು ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಪ್ರತಿ ಮನೆಗೆ ಶೌಚಾಲಯ ನಿರ್ಮಿಸುವ ಭರವಸೆಯನ್ನು ಈಡೇರಿಸಿದ್ದೇವೆ ಎಂದರು.

‘ಒಂದು ಕಡೆ ಎನ್‌ಡಿಎ ಸರ್ಕಾರ ಬಿಹಾರದ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾಯಿಸುತ್ತಿದ್ದರೆ, ಮತ್ತೊಂದೆಡೆ, ಆರ್‌ಜೆಡಿ ನಾಯಕರು ಸವಲತ್ತುಗಳನ್ನು ಸ್ಥಗಿತಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಲಿಖಿತ ಪ್ರಸ್ತಾವನೆಯನ್ನು ನೀಡಿದ್ದಾರೆ. ಆರ್‌ಜೆಡಿಯ ಈ ನಡೆ ನೋವುಂಟು ಮಾಡಿದೆ’ ಎಂದು ವಿಷಾದಿಸಿದರು.

ADVERTISEMENT

ಮಹಿಳಾ ರೋಜ್‌ಗಾರ್‌ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಹಣವನ್ನು ವರ್ಗಾಯಿಸುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಆರ್‌ಜೆಡಿ ಸಂಸದ ಮನೋಜ್ ಝಾ ಅವರು ಅ.31ರಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.