ಪಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರದ ನೂತನ ಎನ್‌ಡಿಎ ಸರ್ಕಾರ ಫೆಬ್ರುವರಿ 10ರಂದು ವಿಶ್ವಾಸಮತವನ್ನು ಕೋರಲಿದೆ. ಈ ಸಂಬಂಧ ಮಂಗಳವಾರ ಅಧಿಸೂಚನೆ ಹೊರಡಿಸಲಾಗಿದೆ.
ಬಜೆಟ್ ಅಧಿವೇಶನದ ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ಹಿಂದೆಯೇ ಸರ್ಕಾರ ವಿಶ್ವಾಸಮತವನ್ನು ಕೋರಲಿದೆ ಎಂದು ತಿಳಿಸಲಾಗಿದೆ.
ನಾಟಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ನಿತೀಶ್ ಕುಮಾರ್, ಬಿಜೆಪಿ ಬೆಂಬಲದೊಂದಿಗೆ ಭಾನುವಾರ ಮತ್ತೆ ಸರ್ಕಾರ ರಚಿಸಿದ್ದು, 9ನೇ ಬಾರಿಗೆ ಸಿ.ಎಂ. ಆಗಿ ಪ್ರಮಾಣ ಸ್ವೀಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.