ADVERTISEMENT

ಬಿಹಾರ: ಕುಡಿದ ಮತ್ತಿನಲ್ಲೇ ಧ್ವಜಾರೋಹಣ ನೆರವೇರಿಸಲು ಹೋದ ಮುಖ್ಯ ಶಿಕ್ಷಕನ ಬಂಧನ

ಪಿಟಿಐ
Published 27 ಜನವರಿ 2025, 5:31 IST
Last Updated 27 ಜನವರಿ 2025, 5:31 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮುಜಾಫರ್‌ಪುರ: ಗಣರಾಜ್ಯೋತ್ಸವದ ವೇಳೆ ಕುಡಿದ ಮತ್ತಿನಲ್ಲೇ ರಾಷ್ಟ್ರಧ್ವಜಾರೋಹಣ ಮಾಡಲು ಪ್ರಯತ್ನಿಸಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಶಿಕ್ಷಕನ ವರ್ತನೆಯಿಂದ ಆಕ್ರೋಶಗೊಂಡ ಸ್ಥಳೀಯರು ಮೀನಾಪುರ ಶಾಸಕ ಮುನ್ನಾ ಯಾದವ್ ಅವರಿಗೆ ವಿಚಾರ ತಿಳಿಸಿದ್ದರು. ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ADVERTISEMENT

'ಪೂರ್ವ ಧರಮ್‌ಪುರದಲ್ಲಿರುವ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಸಂಜಯ್‌ ಕುಮಾರ್‌ ಸಿಂಗ್‌ ಅವರು ಕುಡಿದ ಮತ್ತಿನಲ್ಲಿ ಧ್ವಜಾರೋಹಣ ನೆರವೇರಿಸಲು ಪ್ರಯತ್ನಿಸಿದ ಆರೋಪದಲ್ಲಿ ದೂರು ದಾಖಲಾಗಿದೆ. ತಪಾಸಣೆ ನಡೆಸಿದಾಗ ಸಂಜಯ್‌ ಮದ್ಯ ಸೇವಿಸಿರುವುದು ಖಚಿತವಾಗಿದೆ' ಎಂದು ರಾಂಪುರ್‌ಹರಿ ಠಾಣೆಯ ಅಧಿಕಾರಿ ಸುಜಿತ್‌ ಕುಮಾರ್‌ ತಿಳಿಸಿದ್ದಾರೆ.

ಸಂಜಯ್‌ ಬಂಧನಕ್ಕೂ ಮುನ್ನ, ತಮಗೆ ಕಳೆದ ಐದು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.

ಬಿಹಾರ ಸರ್ಕಾರ 2016ರ ಏಪ್ರಿಲ್‌ 5ರಂದು ಮದ್ಯಪಾನ ನಿಷೇಧ ಜಾರಿಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.