ADVERTISEMENT

ಬಿಹಾರ ರಾಜಕೀಯ: ಜೀತನ್ ರಾಮ್ ಮಾಂಝಿ ಪಕ್ಷ ಎನ್‌ಡಿಎ ಜತೆ ವಿಲೀನ

ನಾಳೆ ಅಧಿಕೃತವಾಗಿ ಘೋಷಣೆ

ಪಿಟಿಐ
Published 2 ಸೆಪ್ಟೆಂಬರ್ 2020, 10:50 IST
Last Updated 2 ಸೆಪ್ಟೆಂಬರ್ 2020, 10:50 IST
ಮಾಜಿ ಮುಖ್ಯಮಂತ್ರಿ ಜೀತನ್ ರಾಮ್  ಮಾಂಝಿ
ಮಾಜಿ ಮುಖ್ಯಮಂತ್ರಿ ಜೀತನ್ ರಾಮ್  ಮಾಂಝಿ   

ಪಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿಜೀತನ್ ರಾಮ್ ಮಾಂಝಿ ನೇತೃತ್ವದ ಎಚ್‌ಎಎಂ(ಎಸ್‌) ಪಕ್ಷವುಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಎನ್‌ಡಿಎ ಒಕ್ಕೂಟದಲ್ಲಿ ಸೇರ್ಪಡೆಯಾಗಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಪಕ್ಷದ ಮುಖಂಡ ಮಾಂಝಿ ಅವರು ಗುರುವಾರ ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ವಕ್ತಾರ ಡ್ಯಾನಿಷ್ ರಿಜ್ವಾನ್ ಹೇಳಿದ್ದಾರೆ. ಬಿಹಾರದಲ್ಲಿ ಅಕ್ಟೋಬರ್– ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಪಕ್ಷವು ಬೆಂಬಲಿಸಿದೆ ಎಂದು ಪಕ್ಷದ ಮುಖಂಡ ಮಾಂಝಿ ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.