ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್
ಪಿಟಿಐ
ಅರರಿಯಾ(ಬಿಹಾರ): ಚುನಾವಣಾ ಆಯೋಗವು ಬಿಜೆಪಿಯ ಪರವಾಗಿ ಕೆಲಸ ಮಾಡುವ ಮೂಲಕ ‘ಗೋದಿ ಆಯೋಗ’ವಾಗಿ ಬದಲಾಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಭಾನುವಾರ ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ 'ಇಂಡಿಯಾ' ಮೈತ್ರಿಕೂಟದ ಸದಸ್ಯರೊಂದಿಗಿನ ಪತ್ರಿಕಾಗೋಷ್ಠಿಯಲ್ಲಿ ತೇಜಸ್ವಿ ಯಾದವ್ ಮಾತನಾಡಿದ್ದಾರೆ.
‘ಚುನಾವಣಾ ಆಯೋಗವು ತನ್ನ ನಂಬಿಕೆಯನ್ನು ಕಳೆದುಕೊಂಡಿದೆ. ಬಿಹಾರದಲ್ಲಿ ಎಸ್‌ಐಆರ್ ಮಾಡುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ದಾಳಿ ಮಾಡಿದೆ. ಇದು ಜನರ ಮತವನ್ನು ಕಳ್ಳತನ ಮಾಡುವ ಪ್ರಯತ್ನವಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರ ರೀತಿ ವರ್ತಿಸುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
‘ಬಿಹಾರದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯು ಚುನಾವಣಾ ಆಯೋಗದ ಮೂಲಕ ಮತ ಕಳ್ಳತನ ಮಾಡುವುದನ್ನು ನಾವು ತಡೆಯುತ್ತೇವೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.