ಬಿಹಾರ ಚುನಾವಣೆ
(ಚಿತ್ರ ಕೃಪೆ: X/@ECISVEEP)
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಕಾಂಗ್ರೆಸ್, 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ತಡರಾತ್ರಿ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ರಾಮ್ ಅವರಿಗೆ ಕುಟುಂಬಾ ಮತ್ತು ಸಿಎಲ್‌ಪಿ ನಾಯಕ ಶಕೀಲ್ ಅಹ್ಮದ್ ಖಾನ್ ಅವರಿಗೆ ಕದ್ವಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಆರ್‌ಜೆಡಿ ಸೇರಿದಂತೆ 'ಮಹಾಘಟಬಂಧನ' ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸುವ ಮೊದಲೇ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಈ ನಡುವೆ ಆರ್‌ಜೆಡಿ ಹಾಗೂ ಎಡಪಕ್ಷಗಳೊಂದಿಗೆ ಕಾಂಗ್ರೆಸ್ ಮಾತುಕತೆ ಮುಂದುವರಿಸಿದೆ.
ಮೊದಲ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಇಂದು (ಅ.17) ಕೊನೆಯ ದಿನವಾಗಿದೆ. ಎರಡನೇ ಹಂತಕ್ಕೆ ನಾಮಪತ್ರ ಸಲ್ಲಿಸಲು ಅ.20 ಕೊನೆಯ ದಿನ.
243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.