
ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಬಡತನ, ಭ್ರಷ್ಟಾಚಾರ ಮುಕ್ತ ಸರ್ಕಾರ ರಚಿಸುತ್ತೇನೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಶುಕ್ರವಾರ ತಿಳಿಸಿದ್ದಾರೆ.
ಇಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಬಿಹಾರಿಯಾಗಿ ನನ್ನ ರಾಜ್ಯ ಬಡತನದಲ್ಲಿದೆ. ಇದು ವಿಷಯದಿಂದ ನನಗೆ ನೋವಾಗಿದೆ. ನಿರುದ್ಯೋಗ, ಭ್ರಷ್ಟಾಚಾರ, ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಬಿಹಾರದಲ್ಲಿ 20 ವರ್ಷಗಳ ಎನ್‌ಡಿಎ ಆಡಳಿತ ಮತ್ತು 11 ವರ್ಷಗಳ ಕೇಂದ್ರ ಆಡಳಿತದ ಹೊರತಾಗಿಯೂ ರಾಜ್ಯದ ತಲಾ ಆದಾಯ ಅತ್ಯಂತ ಕಡಿಮೆಯಾಗಿದ್ದು, ರೈತರು ಬಡವರಾಗಿಯೇ ಇದ್ದಾರೆ ಎಂದು ಯಾದವ್ ಹೇಳಿದ್ದಾರೆ.
ಎನ್‌ಡಿಎ ಅಧಿಕಾರಕ್ಕೆ ಬಂದರೂ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಯಾದವ್ ತಿಳಿಸಿದ್ದಾರೆ.
ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹500ಕ್ಕೆ ಇಳಿಸುತ್ತೇವೆ. ವೃದ್ಧಾಪ್ಯ ಪಿಂಚಣಿಯನ್ನು ₹1,500ಕ್ಕೆ ಹೆಚ್ಚಿಸುತ್ತೇವೆ ಎಂದು ಯಾದವ್ ಹೇಳಿದ್ದಾರೆ.
243 ಸ್ಥಾನ ಹೊಂದಿರುವ ಬಿಹಾರ ವಿಧಾನಸಭೆ ಚುನಾವಣೆಯು ನವೆಂಬರ್ 6 ಮತ್ತು 11ರಂದು ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.