
ಪ್ರಾತಿನಿಧಿಕ ಚಿತ್ರ
ಕೋಲ್ಕತ್ತ: ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದ್ದು, ದೊಡ್ಡ ಮಟ್ಟದ ಗೆಲುವಿನತ್ತ ಹೆಜ್ಜೆ ಇಟ್ಟಿದೆ. ಈ ಚುನಾವಣೆಯ ಫಲಿತಾಂಶ ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.
ಬಿಹಾರದಲ್ಲಿ ಎನ್‌ಡಿಎಗೆ ಮುನ್ನಡೆ ಸಿಗುತಿದ್ದಂತೆ ಎಕ್ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, ನಾಲ್ಕನೇ ಬಾರಿಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ 250 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಬಿಜೆಪಿಯನ್ನು ವಿರೋಧಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂಬುದು ಬಿಹಾರ ಚುನಾವಣೆಯಿಂದ ಮತ್ತೊಮ್ಮೆ ಸಾಭೀತಾಗಿದೆ ಎಂದು ಅವರು ಹೇಳಿದ್ದಾರೆ.
‘ಅದು ಬಿಹಾರದ ಸಮೀಕರಣ. ಅಲ್ಲಿನ ಚುನಾವಣೆಯ ಫಲಿತಾಂಶ ಬಂಗಾಳದ ಮೇಲೆ ಪರಿಣಾಮ ಬೀರುವುದಿಲ್ಲ. ಬಂಗಾಳದಲ್ಲಿ ಅಭಿವೃದ್ಧಿ, ಏಕತೆ, ಸಾಮರಸ್ಯ, ಹಕ್ಕುಗಳು ಮತ್ತು ಸ್ವಾಭಿಮಾನವೇ ಪ್ರಮುಖ ಅಂಶಗಳು. ನಾವು ಮುಂದಿನ ಚುನಾವಣೆಯಲ್ಲಿ 250ಕ್ಕೂ ಅಧಿಕ ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ’ ಎಂದು ರಾಜ್ಯಸಭೆಯ ಮಾಜಿ ಸದಸ್ಯ ಘೋಷ್ ಹೇಳಿದ್ದಾರೆ.
‘ಬಿಜೆಪಿಯನ್ನು ವಿರೋಧಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅದು ಪದೇ ಪದೇ ಪ್ರದರ್ಶನವಾಗುತ್ತಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.