voter lis
ನವದೆಹಲಿ: ಮತದಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಡುವಂತೆ 1.98 ಲಕ್ಷ ಮತದಾರರು ಹಾಗೂ ಹೆಸರು ಸೇರ್ಪಡೆಗೆ 30 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆದಿದ್ದು, ಅದರ ಭಾಗವಾಗಿ ಈ ಪ್ರಕ್ರಿಯೆ ನಡೆದಿದೆ.
ಪರಿಷ್ಕರಣೆಯ ಮೊದಲ ಹಂತದ ನಂತರ ಕರಡು ಮತದಾರರ ಪಟ್ಟಿಯನ್ನು ಆ. 1ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಸೆ. 1ರವರೆಗೂ ಕಾಲಾವಕಾಶ ನೀಡಲಾಗಿತ್ತು.
ಬಿಹಾರ ವಿಧಾನಸಭೆಗೆ ಮುಂಬರುವ ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಸೆ. 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ.
ರಾಜಕೀಯ ಪಕ್ಷಗಳು ನೇಮಿಸಿದ್ದ ಬೂತ್ ಮಟ್ಟದ ಏಜೆಂಟರು, ಮತದಾರರ ಪಟ್ಟಿಗೆ ಹೆಸರು ಸೇಪರ್ಡೆಗಾಗಿ 25 ಹಾಗೂ ತೆಗೆಯಲು 103 ಅರ್ಜಿಗಳನ್ನು ಸಲ್ಲಿಸಿದ್ದಾರೆ.
ರಾಜ್ಯದ 7.24 ಕೋಟಿ ಮತದಾರರಲ್ಲಿ ಶೇ 99.11ರಷ್ಟು ಮತದಾರರು ತಮ್ಮ ದಾಖಲೆಗಳನ್ನು ಪರಿಶೀಲನೆಗಾಗಿ ಆಯೋಗಕ್ಕೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.