ADVERTISEMENT

ಬಿಹಾರ: ಗಯಾದಲ್ಲಿ ನಕ್ಸಲ್ ಕಮಾಂಡರ್ ಸಂದೀಪ್ ಯಾದವ್ ಶವವಾಗಿ ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಮೇ 2022, 10:55 IST
Last Updated 26 ಮೇ 2022, 10:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗಯಾ (ಬಿಹಾರ): ನಕ್ಸಲ್ ಕಮಾಂಡರ್ ಆಗಿದ್ದ ಸಂದೀಪ್ ಯಾದವ್ ಅವರ ಶವವನ್ನು ಗಯಾ ಜಿಲ್ಲೆಯ ಬಂಕೆಬಜಾರ್ ಗ್ರಾಮದಲ್ಲಿ ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂದೀಪ್‌ ಯಾದವ್‌ ತಲೆಗೆ ವಿವಿಧ ರಾಜ್ಯ ಸರ್ಕಾರಗಳು ₹83 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದವು.

ಲುಟುವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾದವ್ ಶವವಾಗಿ ಬುಧವಾರ ಪತ್ತೆಯಾಗಿದ್ದಾರೆ. ಯಾದವ್ ಸಾವನ್ನು ಪೊಲೀಸರು ಗುರುವಾರ ಖಚಿತಪಡಿಸಿದ್ದಾರೆ.

ADVERTISEMENT

ಬಿಹಾರ ಮತ್ತು ಜಾರ್ಖಂಡ್ ಸೇರಿದಂತೆ ಆರು ರಾಜ್ಯಗಳಲ್ಲಿ ಎಸಗಲಾಗಿದ್ದ 500ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತ ಬೇಕಾಗಿದ್ದ. ಗಯಾದ ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜಿನಲ್ಲಿ, ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಶವಪರೀಕ್ಷೆ ನಡೆಸಲಾಯಿತು. ಈ ಪ್ರಕ್ರಿಯೆಯನ್ನು ಚಿತ್ರೀಕರಿಸಲಾಗಿದೆ ಎಂದು ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್‌ಪ್ರೀತ್ ಕೌರ್ ಹೇಳಿದ್ದಾರೆ.

ಯಾದವ್ ಕಳೆದ 25 ವರ್ಷಗಳಿಂದ ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದನು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.