ಅಲ್ಕಾ ಲಾಂಬಾ
ನವದೆಹಲಿ: ಬಿಹಾರದಲ್ಲಿ ಕೈಗೊಂಡಿದ್ದ ‘ಎಸ್‌ಐಆರ್’ ವೇಳೆ, ದಲಿತ ಹಾಗೂ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಲಾಗಿತ್ತು. ಅಂದಾಜು 23 ಲಕ್ಷ ಮಹಿಳೆಯರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಭಾನುವಾರ ಆರೋಪಿಸಿದೆ.
ರಾಜ್ಯದ 59 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಷ್ಟೊಂದು ಸಂಖ್ಯೆಯ ಮಹಿಳೆಯರ ಹೆಸರುಗಳನ್ನು ತೆಗೆದು ಹಾಕಲಾಗಿದೆ. 2020ರ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿಯೇ ತೀವ್ರ ಹಣಾಹಣಿ ಇತ್ತು ಎಂದು ಪಕ್ಷದ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಾಂಬಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.