ADVERTISEMENT

ಇನ್ನು ಬಿಹಾರದ ಮಹಿಳೆಯರಿಗೆ ಮಾತ್ರ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ

ಪಿಟಿಐ
Published 8 ಜುಲೈ 2025, 11:20 IST
Last Updated 8 ಜುಲೈ 2025, 11:20 IST
<div class="paragraphs"><p> ನಿತೀಶ್ ಕುಮಾರ್</p></div>

ನಿತೀಶ್ ಕುಮಾರ್

   

ಪಿಟಿಐ

ಪಟ್ನಾ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 35ರಷ್ಟು ಮೀಸಲಾತಿಯನ್ನು ಇನ್ನು ಮುಂದೆ ಖಾಯಂ ಬಿಹಾರದ ನಿವಾಸಿಗಳಿಗೆ ಮಾತ್ರ ಅನ್ವಯಿಸಲು ಬಿಹಾರ ಸಚಿವ ಸಂಪುಟ ಮಂಗಳವಾರ ನಿರ್ಧರಿಸಿದೆ.

ADVERTISEMENT

ಈ ಹಿಂದೆ ಸರ್ಕಾರಿ ಉದ್ಯೋಗಗಳಲ್ಲಿ ವಾಸಸ್ಥಳ ನೀತಿಯನ್ನು ಜಾರಿಗೊಳಿಸಬೇಕು ಎಂಬ ಕೂಗು ಕೇಳಿಬಂದಿತ್ತು. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. 

‘ಬಿಹಾರದ ಮಹಿಳೆಯರಿಗೆ ಮಾತ್ರ ಸರ್ಕಾರಿ ಉದ್ಯೋಗಗಳಲ್ಲಿ ಶೇ 35ರಷ್ಟು ಮೀಸಲಾತಿಯನ್ನು ನೀಡಬೇಕು ಎನ್ನುವ ಆಡಳಿತ ಇಲಾಖೆಯ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಹೊಸ ನೀತಿಯು ರಾಜ್ಯದಲ್ಲಿ ಖಾಯಂ ನಿವಾಸಿಗಳಾಗಿರುವ ಮಹಿಳೆಯರಿಗೆ ಹಣಕಾಸಿನ ಸ್ವಾತಂತ್ರ್ಯ ಮತ್ತು ಉದ್ಯೋಗ ಭದ್ರತೆಯನ್ನು ನೀಡುತ್ತದೆ’ ಎಂದು ಕ್ಯಾಬಿನೆಟ್‌ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್. ಸಿದ್ಧಾರ್ಥ ಹೇಳಿದ್ದಾರೆ.

2016ರಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಎಲ್ಲಾ ಹಂತಗಳಲ್ಲಿ ಮಹಿಳೆಯರಿಗೆ ಶೇ 35 ರಷ್ಟು ಮೀಸಲಾತಿಯನ್ನು ಪರಿಚಯಿಸಿತ್ತು.  ಯಾವುದೇ ರಾಜ್ಯದಿಂದ ಬಿಹಾರಕ್ಕೆ ಬಂದು ನೆಲೆಸಿದ ಮಹಿಳೆಯರು ಇದರ ಲಾಭವನ್ನು ಪಡೆಯಬಹುದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.